ಇಂದಿನಿಂದ ಸಂಸತ್ ಅಧಿವೇಶನ: ವೈಫಲ್ಯ ಪ್ರಶ್ನಿಸಲು ಪ್ರತಿಪಕ್ಷಗಳ ಸಿದ್ಧತೆ
ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಅರುಣಾಚಲ ಪ್ರದೇಶ, ಉತ್ತರಾಖಂಡ ವಿವಾದ ಹಾಗೂ ಕಾಶ್ಮೀರದಲ್ಲಿ ಉಂಟಾಗಿರುವ ಉದ್ವಿಗ್ನ...

ನವದೆಹಲಿ: ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಅರುಣಾಚಲ ಪ್ರದೇಶ, ಉತ್ತರಾಖಂಡ ವಿವಾದ ಹಾಗೂ ಕಾಶ್ಮೀರದಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಅರುಣಾಚಲ ಪ್ರದೇಶ ಪ್ರದೇಶ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ್ದು, ಎನ್ ಎಸ್ ಜಿ ಸದಸ್ಯತ್ವ ಪಡೆಯುವಲ್ಲಿ ಕೇಂದ್ರದ ವೈಫಲ್ಯ, ಕೆಲವು ರಾಜ್ಯಗಳಲ್ಲಿನ ಪ್ರವಾಹದ ಬಗ್ಗೆ, ಕೃಷಿ ಸಮಸ್ಯೆಗಳು ಮತ್ತು ಭಯೋತ್ಪಾದನೆ ಮುಂತಾದ ವಿವಿಧ ವಿಷಯಗಳನ್ನು ವಿಪಕ್ಷಗಳು ಸಭೆಯಲ್ಲಿ ಪ್ರಸ್ತಾಪಿಸಲಿವೆ ಎಂದು ತಿಳಿದುಬಂದಿದೆ.
ಒಂದೆಡೆ ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವತ್ತ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಇತ್ತ ಕೇಂದ್ರ ಸರ್ಕಾರ ಮುಂಗಾರು ಅಧಿವೇಶನದಲ್ಲಿ ತನ್ನ ಮಹತ್ವಕಾಂಕ್ಷಿಯ ಸರಕು ಮತ್ತು ಸೇವೆಗಳ ಮಸೂದೆಗೆ (ಜಿಎಸ್ ಟಿ) ಅನುಮೋದನೆ ಪಡೆಯುವ ಸನ್ನಾಹದಲ್ಲಿದೆ.
ಅಧಿವೇಶನ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಅಂಗೀಕಾರಗೊಳ್ಳುವ ಮಸೂದೆಗಳ ಕೀರ್ತಿ ಯಾವ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದು ಮುಖ್ಯವಲ್ಲ. ಎಲ್ಲಾ ಪಕ್ಷಗಳು ಜನರನ್ನು ಪ್ರತಿನಿಧಿಸುತ್ತವೆ. ಎಲ್ಲಾ ವಿಷಯಗಳನ್ನು ಬದಿಗಿರಿಸಿ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡೋಣ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


