ದೆಹಲಿಯಲ್ಲಿ 10 ವರ್ಷದಷ್ಟು ಹಳೆಯ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ಎನ್'ಜಿಟಿ ಆದೇಶ
ರಾಜಧಾನಿ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳ ನೋಂದಣಿಯನ್ನು ತ್ವರಿಗತಿಯಲ್ಲಿ ರದ್ದು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ) ಸೋಮವಾರ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳ ನೋಂದಣಿಯನ್ನು ತ್ವರಿಗತಿಯಲ್ಲಿ ರದ್ದು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ) ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಈ ಆದೇಶವನ್ನು ನೀಡಿದ್ದು, ನೋಂದಣಿ ರದ್ದು ಪಡಿಸಲಾದ ಎಲ್ಲಾ ವಾಹನಗಳ ಪಟ್ಟಿಯನ್ನು ಆರ್ ಟಿಒ ದೆಹಲಿ ಸಂಚಾರಿ ಪೊಲೀಸರಿಗೆ ಒದಗಿಸುವಂತೆ ದೆಹಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಆದೇಶ ನೀಡಿದೆ.
ಅಲ್ಲದೆ, ರಸ್ತೆಗಳಲ್ಲಿ ಕಸಕ್ಕೆ ಬೆಂಕಿ ಹಾಕಿ ವಾಯುಮಾಲಿನ್ಯ ಸೃಷ್ಟಿಸುತ್ತಿರುವ ಪ್ರಕರಣಗಳ ಕುರಿತಂತೆ ಕೆಲ ಸಂಬಂಧಿತ ಇಲಾಖೆಗಳು ಕೂಡ ವರದಿ ಸಲ್ಲಿಸುವಂತೆ ತಿಳಿಸಿದೆ.
ಈ ಹಿಂದೆಯಷ್ಟೇ ಹಸಿರು ಪೀಠ 10 ವರ್ಷಗಳಿಗಿಂತಲೂ ಹಳೆಯ ವಾಹನಗಳ ಮೇಲೆ ನಿಷೇಧ ಹೇರಿತ್ತು. ಇಂದು ನಡೆದ ವಿಚಾರಣೆ ವೇಳೆ ದೆಹಲಿ ಸಾರಿಗೆ ಇಲಾಖೆ ಕೆಲ ವರದಿಗಳನ್ನು ಸಲ್ಲಿಸಿದ್ದು, ಕಳೆದ 1 ವರ್ಷದಲ್ಲಿ ಆದೇಶದಂತೆಯೇ 10 ವರ್ಷಗಳಿಗಿಂತಲೂ ಹಳೆಯದಾದ 3,000 ಡೀಸೆಲ್ ಕಾರುಗಳನ್ನು ಹಾಗೂ 15 ವರ್ಷಗಳಿಗಿಂತಲೂ ಹಳೆಯದಾದ ಪೆಟ್ರೋಲ್ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


