ದಕ್ಷಿಣ ಚೀನಾ ಸಮುದ್ರ ವಿವಾದ: ಚೀನಾಗೆ ತಿರುಗೇಟು ನೀಡಲು ಏಷ್ಯಾ ರಾಷ್ಟ್ರಗಳ ಬೆಂಬಲಕ್ಕೆ ನಿಂತ ಭಾರತ
ವಿಶ್ವ ಸಂಸ್ಥೆ ನ್ಯಾಯಮಂಡಳಿ ದಕ್ಷಿಣ ಚೀನಾ ಸಮುದ್ರದ ವಿಷಯದಲ್ಲಿ ಚೀನಾ ಹಕ್ಕುಗಳನ್ನು ತಿರಸ್ಕರಿಸಿರುವ ಬೆನ್ನಲ್ಲೇ ಭಾರತ ಸರ್ಕಾರ ಏಷ್ಯಾ ರಾಷ್ಟ್ರಗಳ ಬೆಂಬಲಕ್ಕೆ ನಿಂತಿದೆ.

ನವದೆಹಲಿ: ವಿಶ್ವ ಸಂಸ್ಥೆ ನ್ಯಾಯಮಂಡಳಿ ದಕ್ಷಿಣ ಚೀನಾ ಸಮುದ್ರದ ವಿಷಯದಲ್ಲಿ ಚೀನಾ ಹಕ್ಕುಗಳನ್ನು ತಿರಸ್ಕರಿಸಿರುವ ಬೆನ್ನಲ್ಲೇ ಭಾರತ ಏಷ್ಯಾ ರಾಷ್ಟ್ರಗಳ ಬೆಂಬಲಕ್ಕೆ ನಿಂತಿದೆ.
ತೀರ್ಪಿನ ಹಿನ್ನೆಲೆಯಲ್ಲಿ ಒಂದು ವೇಳೆ ದಕ್ಷಿಣ ಚೀನಾ ಸಮುದ್ರಕ್ಕೆ ಸಂಬಂಧಿಸಿದ ಏಷ್ಯಾರಾಷ್ಟ್ರಗಳ ನೌಕಾ ಭದ್ರತೆಗೆ ಧಕ್ಕೆ ಉಂಟಾದಲ್ಲಿ ಅದನ್ನು ತಡೆಗಟ್ಟಲು ಭಾರತ ಸರ್ಕಾರ ಸಹಾಯ ಮಾಡಲಿದೆ ಎಂದು ಭಾರತೀಯ ನೌಕಾಪಡೆ ಅಧಿಕಾರಿ ತಿಳಿಸಿದ್ದಾರೆ. ಮಲೇಷ್ಯಾದ ಕ್ಲಾಂಗ್ ಬಂದರಿನಲ್ಲಿ ನಡೆದ ಜಂಟಿ ತಾಲೀಮು ನಡೆದ ವೇಳೆ ರಿಯರ್ ಅಡ್ಮಿರಲ್(ಧ್ವಜಾಧಿಕಾರಿ)ಎಸ್ ವಿ ಭೋಕರೆ ಈ ಬಗ್ಗೆ ಮಾತನಾಡಿದ್ದು, ಭಾರತ ಶಾಂತಿಯ ಪರವಾಗಿದೆಯಾದರೂ, ಬೇರೆ ರಾಷ್ಟ್ರಗಳು ಸಮಸ್ಯೆಗೆ ಸಿಲುಕಿದರೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ದಕ್ಷಿಣ ಚೀನಾ ಸಮುದ್ರದ ವಿಚಾರದಲ್ಲಿ ವಿಶ್ವ ಸಂಸ್ಥೆ ನ್ಯಾಯಮಂಡಳಿ ತೀರ್ಪಿನ ವಿರುದ್ಧ ಚೀನಾ ಅಸಮಾಧಾನ ವ್ಯಕ್ತಪಡಿಸಿದ್ದು, ದಕ್ಷಿಣ ಚೀನಾ ಸಮುದ್ರದ ವಿವಾದಿತ ಪ್ರದೇಶದಲ್ಲಿಯೂ ತನ್ನ ಸಾರ್ವಭೌಮತ್ವ ಸ್ಥಾಪಿಸುವುದಾಗಿ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಫಿಲಿಪೈನ್ಸ್ ಸೇರಿದಂತೆ ಹಲವು ಏಷ್ಯಾದ ರಾಷ್ಟ್ರಗಳು ಪ್ರತಿಪಾದಿಸುತ್ತಿರುವ ದಕ್ಷಿಣ ಚೀನಾ ಸಮುದ್ರದ ವಿವಾದಿತ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಇದರಿಂದಾಗಿ ಏಷ್ಯಾ ರಾಷ್ಟ್ರಗಳ ನೌಕಾ ಭದ್ರತೆಗೆ ಧಕ್ಕೆ ಉಂಟಾಗದಂತೆ ಸಹಾಯ ಮಾಡುವುದಾಗಿ ಭಾರತ ಭರವಸೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


