ದೇಶ

ಬಿಜೆಪಿಗೆ ಸಿಧು ಗುಡ್ ಬೈ, ಈಗ ಕೀರ್ತಿ ಆಜಾದ್ ಪತ್ನಿ ಎಎಪಿ ಸೇರ್ಪಡೆ?

ಮುಂಗಾರು ಅಧಿವೇಶನದ ಮೊದಲ ದಿನವೇ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ಅವರು ಬಿಜೆಪಿ ತೊರೆದು ಶಾಕ್ ನೀಡಿದ್ದರು. ಈಗ ಬಿಜೆಪಿಯಿಂದ...

ಬಿಜೆಪಿಗೆ ಸಿಧು ಗುಡ್ ಬೈ, ಈಗ ಕೀರ್ತಿ ಆಜಾದ್ ಪತ್ನಿ ಎಎಪಿ ಸೇರ್ಪಡೆ?
ಕೀರ್ತಿ ಆಜಾದ್ ಹಾಗೂ ಪತ್ನಿ
Published On :
ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನವೇ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ಅವರು ಬಿಜೆಪಿ ತೊರೆದು ಶಾಕ್ ನೀಡಿದ್ದರು. ಈಗ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಸಂಸದ ಕೀರ್ತಿ ಆಜಾದ್ ಅವರ ಪತ್ನಿ ಪೂನಂ ಝಾ ಅವರು ಎಎಪಿ ಸೇರುವ ತಯಾರಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಕೀರ್ತಿ ಆಜಾದ್ ಅವರು, ಪತ್ನಿ ಎಎಪಿ ಸೇರುತ್ತಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ನನ್ನ ಪತ್ನಿ ಎಎಪಿ ಸೇರುವ ನಿರ್ಧಾರ ಆಕೆಯ ವೈಯಕ್ತಿಕ ನಿರ್ಧಾರ ಎಂದು ಹೇಳಿದ್ದಾರೆ.
ಮುಂದಿನ ವರ್ಷ ನಡೆಯುವ ಪಂಜಾಬ್ ವಿಧಾನಸಭೆ ಚುನಾವಣೆಯತ್ತ ಚಿತ್ತ ನೆಟ್ಟಿರುವ ನಾಯಕರು ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. ನವಜೋತ್ ಸಿಂಗ್ ಸಿಧು ರಾಜೀನಾಮೆಯನ್ನು ರಾಜ್ಯಸಭಾ ಸಭಾಪತಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅಂಗೀಕರಿಸಿದ್ದು, ರಾಜ್ಯಸಭಾ ಉಪ ಸಭಾಪತಿ ಪಿ. ಜೆ. ಕುರಿಯನ್ ಈ ವಿಚಾರವನ್ನು ಸದನದಲ್ಲಿ ಪ್ರಕಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.