ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಶೀಘ್ರದಲ್ಲೇ ಮೋದಿ ಜೊತೆ ಫಡ್ನವೀಸ್ ಚರ್ಚೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ...

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಮುಂಬೈನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಗಡಿ ಭಾಗದಲ್ಲಿ ಮರಾಠಿ ಜನರಿಗೆ ಕರ್ನಾಟಕ ನೀಡುತ್ತಿರುವ ಕಿರುಕುಳ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶೀಘ್ರದಲ್ಲೇ ವಿವರಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಗಡಿಯಲ್ಲಿ ನೆಲೆಸಿರುವ ಮರಾಠಿಗರಿಗೆ ಕಿರುಕುಳ ನೀಡುವುದನ್ನು ಕೂಡಲೇ ಕರ್ನಾಟಕ ಸರ್ಕಾರ ನಿಲ್ಲಿಸಬೇಕು. ಸುಪ್ರೀಂಕೋರ್ಟ್ ಅಂತಿಮ ಆದೇಶ ಹೊರಡಿಸುವವರೆಗೂ ಗಡಿಭಾಗದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೇಂದ್ರ ಕರ್ನಾಟಕಕ್ಕೆ ಸೂಚನೆ ನೀಡಬೇಕಿದೆ. ಗಡಿ ವಿವಾದ ಶೀಘ್ರಗತಿಯಲ್ಲಿ ಇತ್ಯರ್ಥಪಡಿಸುವಂತೆ ಈಗಾಗಲೇ ಸುಪ್ರೀಂ ಬಳಿ ಮನವಿಯನ್ನು ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


