ಕಾಶ್ಮೀರದಲ್ಲಿ ಸತತ 13 ನೇ ದಿನವೂ ಕರ್ಫ್ಯೂ ಮುಂದುವರಿಕೆ
ಹಿಜಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿ, ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಕಾಶ್ಮೀರ ಪ್ರತಿಭಟನೆ ಮುಂದುವರೆದಿದೆ.

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವಾನಿ, ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಕಾಶ್ಮೀರ ಪ್ರತಿಭಟನೆ ಮುಂದುವರೆದಿದ್ದು, ಸತತ 13 ನೇ ದಿನವೂ ಕರ್ಫ್ಯೂ ಮುಂದುವರೆದಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಕಣಿಯ ಬಹುತೇಕ ಭಾಗಗಳಲ್ಲಿ ಇನ್ನು ಕೆಲವು ದಿನ ಕರ್ಫ್ಯೂ ಮುಂದುವರೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಂಗಳವಾರದ ಜು.19 ರಂದು ರಾಜ್ಯ ಸರ್ಕಾರ ಪತ್ರಿಕೆಗಳ ಪ್ರಕಟಣೆಗೆ ವಿಧಿಸಿದ್ದ ತಾತ್ಕಾಲಿಕ ನಿಷೇಧವನ್ನು ರದ್ದುಗೊಳಿಸಿದ್ದು, ಮುಂದಿನ ನಡೆಯ ಬಗ್ಗೆ ಚರ್ಚಿಸಲು ಸ್ಥಳೀಯ ಪತ್ರಿಕೆಗಳ ಸಂಪಾದಕರು ಸಭೆ ನಡೆಸಲಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಪತ್ರಿಕೆಗಳನ್ನು ಪ್ರಕಟ ಮಾಡುವ ವಿಷಯದ ಬಗ್ಗೆ ಸರ್ಕಾರ, ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಅಮಿತಾಬ್ ಮಟ್ಟು ಅವರ ಮೂಲಕ ಎಲ್ಲಾ ಸಂಪಾದಕರಿಗೂ ಸ್ಪಷ್ಟನೆ ರವಾನಿಸಿದೆ. ಇದರಿಂದಾಗಿ ಸತತ 5 ದಿನಗಳ ವರೆಗೆ ಪತ್ರಿಕೆ ಪ್ರಕಟ ಮಾಡುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಮೊಬೈಲ್ ಕರೆ ಸೌಲಭ್ಯಕ್ಕೆ ವಿಧಿಸಲಾಗಿದ್ದ ನಿರ್ಬಂಧ ಮುಂದುವರೆದಿದ್ದು ಬಿಎಸ್ ಎನ್ ಎಲ್ ನಿಂದ ಕೆಲವು ಸೀಮಿತ ಕರೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


