ದೇಶ

ಲೋಕಸಭೆ: ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆ ಕುರಿತ ಚರ್ಚೆ ವೇಳೆ ನಿದ್ದೆಗೆ ಜಾರಿದ ರಾಹುಲ್ ಗಾಂಧಿ

ಲೋಕಸಭೆಯ ಕಲಾಪದಲ್ಲಿ ಗುಜರಾತ್ ನಲ್ಲಿ ನಡೆದಿದ್ದ ದಲಿತರ ಮೇಲೆನ ಹಲ್ಲೆ ಪ್ರಕರಣದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದ ವೇಳೆ...

ಲೋಕಸಭೆ: ಗುಜರಾತ್ ನಲ್ಲಿ ದಲಿತರ ಮೇಲೆ ಹಲ್ಲೆ ಕುರಿತ ಚರ್ಚೆ ವೇಳೆ ನಿದ್ದೆಗೆ ಜಾರಿದ ರಾಹುಲ್ ಗಾಂಧಿ
ಲೋಕಸಭೆಯಲ್ಲಿ ನಿದ್ದೆಗೆ ಜಾರಿದ ರಾಹುಲ್ ಗಾಂಧಿ ಚಿತ್ರ
Published On :
ನವದೆಹಲಿ:ಲೋಕಸಭೆಯ ಕಲಾಪದಲ್ಲಿ ಗುಜರಾತ್ ನಲ್ಲಿ ನಡೆದಿದ್ದ ದಲಿತರ ಮೇಲೆನ ಹಲ್ಲೆ ಪ್ರಕರಣದ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿದ್ದೆ ಶರಣಾಗಿರುವ ಘಟನೆ ಗುರುವಾರ ನಡೆದಿದ್ದು, ಅವರ ಬಗ್ಗೆ ಸಾರ್ವಜನಿಕರಲ್ಲಿ ಮತ್ತು ಸಾಮಾಜಿಕ ತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.
ಗುಜರಾತ್ ನಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಸ್ತಾಪಿಸಿ ಗಂಭೀರವಾಗಿ ಚರ್ಚೆ ನಡೆಸುತ್ತಿರುವ ವೇಳೆಯೇ ರಾಹುಲ್ ನಿದ್ದೆ ಮಾಡುತ್ತಿರುವ ದೃಶ್ಯವನ್ನು ಖಾಸಗಿ ಚಾನೆಲ್ ವೊಂದು ಪ್ರಸಾರ ಮಾಡಿತ್ತು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಕಾಂಗ್ರೆಸ್ ಸಂಸದರು ಆಡಳಿತಾರೂಢ ಬಿಜೆಪಿ ವಿರುದ್ಧ ಏರುಧ್ವನಿಯಲ್ಲಿ ಪ್ರಶ್ನಿಸಿ ವಾಗ್ದಾಳಿ ನಡೆಸುತ್ತಿದ್ದರೆ ರಾಹುಲ್ ತಮಗೇನೂ ಸಂಬಂಧವೇ ಇಲ್ಲ ಎಂಬ ರೀತಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಆದರೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಈ ಆರೋಪವನ್ನು ಅಲ್ಲಗಳೆದಿದ್ದು, ರಾಹುಲ್ ಗಾಂಧಿಯವರು ಸುಮ್ಮನೆ ಕಣ್ಣು ಮುಚ್ಚಿದ್ದರಷ್ಟೆ, ನಿದ್ದೆ ಮಾಡಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.