ದೇಶ

ಗೂಗಲ್‌ನ ಕ್ರಿಮಿನಲ್ ಪಟ್ಟಿಯಲ್ಲಿ ಮೋದಿ ಭಾವಚಿತ್ರ: ಸಂಸ್ಥೆಯ ಸಿಇಒ ಗೆ ಕೋರ್ಟ್ ನೋಟಿಸ್

ಗೂಗಲ್ ಸರ್ಚ್ ಇಂಜಿನ್ ನಲ್ಲಿ ಟಾಪ್ 10 ಕ್ರಿಮಿನಲ್ ಪಟ್ಟಿಯ ಚಿತ್ರಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದದ್ದು ಈಗ ಗೂಗಲ್ ಸಂಸ್ಥೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಗೂಗಲ್‌ನ ಕ್ರಿಮಿನಲ್ ಪಟ್ಟಿಯಲ್ಲಿ ಮೋದಿ ಭಾವಚಿತ್ರ: ಸಂಸ್ಥೆಯ ಸಿಇಒ ಗೆ ಕೋರ್ಟ್ ನೋಟಿಸ್
ಗೂಗಲ್‌ನ ಕ್ರಿಮಿನಲ್ ಪಟ್ಟಿಯಲ್ಲಿ ಮೋದಿ ಭಾವಚಿತ್ರ: ಸಂಸ್ಥೆಯ ಸಿಇಒ ಗೆ ಕೋರ್ಟ್ ನೋಟಿಸ್
Published On :

ಅಲಹಾಬಾದ್: ಗೂಗಲ್ ಸರ್ಚ್ ಇಂಜಿನ್ ನಲ್ಲಿ ಟಾಪ್ 10 ಕ್ರಿಮಿನಲ್ ಪಟ್ಟಿಯ ಚಿತ್ರಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದದ್ದು ಈಗ ಗೂಗಲ್ ಸಂಸ್ಥೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ನರೇಂದ್ರ ಮೋದಿ ಅವರ ಭಾವಚಿತ್ರಡಿದ್ದ ಪ್ರಕರಣದ ಬಗ್ಗೆ ಅಲಹಾಬಾದ್ ನ್ಯಾಯಾಲಯ ಗೂಗಲ್ ಸಿಇಒ, ಭಾರತದ ಗೂಗಲ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರಿಂದ ಗೂಗಲ್ ಸಂಸ್ಥೆ ಹಾಗೂ ಅದರ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. 
ಗೂಗಲ್ ಸರ್ಚ್ ನಲ್ಲಿ ಮೋದಿ ಅವರ ಭಾವಚಿತ್ರ ಟಾಪ್ 10 ಕ್ರಿಮಿನಲ್ ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಶೀಲ್ ಕುಮಾರ್ ಮಿಶ್ರಾ ಎಂಬ ವಕೀಲಕರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗೂಗಲ್ ನ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದರೊಂದಿಗೆ ಸಂಸ್ಥೆ ವಿರುದ್ಧ ಪ್ರಕರಣದ ದಾಖಲಿಸುವಂತೆ ಸೂಚನೆ ನೀಡಿದ್ದು ಮುಂದಿನ ವಿಚಾರಣೆಯನ್ನು ಆಗಸ್ಟ್ 31 ಕ್ಕೆ ನಿಗದಿ ಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.