ದೇಶ

ಬಿಜೆಪಿ, ಕಾಂಗ್ರೆಸ್ ದಲಿತರನ್ನು ರಾಜಕೀಯ ವಸ್ತುವಾಗಿ ಬಳಸಿಕೊಳ್ಳುತ್ತಿವೆ: ಮಾಯಾವತಿ

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ದಲಿತರನ್ನು ರಾಜಕೀಯ ವಸ್ತುವಾಗಿ ಬಳಸಿಕೊಳ್ಳುತ್ತಿವೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ...

ಬಿಜೆಪಿ, ಕಾಂಗ್ರೆಸ್ ದಲಿತರನ್ನು ರಾಜಕೀಯ ವಸ್ತುವಾಗಿ ಬಳಸಿಕೊಳ್ಳುತ್ತಿವೆ: ಮಾಯಾವತಿ
ಮಾಯಾವತಿ
Published On :
ನವದೆಹಲಿ: ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ದಲಿತರನ್ನು ರಾಜಕೀಯ ವಸ್ತುವಾಗಿ ಬಳಸಿಕೊಳ್ಳುತ್ತಿವೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಅವರು ಆರೋಪಿಸಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಗುಜರಾತ್ ನ ಉನಾ ಪಟ್ಟಣದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣದ ಚರ್ಚೆಯ ವೇಳೆ ಮಾತನಾಡಿದ ಮಾಯಾವತಿ, ಕಳೆದ ಒಂದೂವರೆ ವರ್ಷದಿಂದ ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದೆ. ಈಗ ದಲಿತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದರು.
ದಲಿತರ ಮೇಲಿನ ಹಲ್ಲೆ ಕೇವಲ ಗುಜರಾತ್ ಗೆ ಮಾತ್ರ ಸೀಮಿತವಾಗಿಲ್ಲ, ಪ್ರಮುಖವಾಗಿ ದೇಶದಲ್ಲಿ ಬಿಜೆಪಿ ಆಡಳಿತ ಇರುವ ಎಲ್ಲಾ ರಾಜ್ಯಗಳಲ್ಲಿ ಈ ರೀತಿಯ ಹಲ್ಲೆಗಳು ಹೆಚ್ಚಳವಾಗುತ್ತಿರುವುದಾಗಿ ಮಾಯಾವತಿ ದೂರಿದರು.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ದಲಿತರನ್ನು ರಾಜಕೀಯ ವಸ್ತುವಾಗಿ ಬಳಸಿಕೊಳ್ಳುತ್ತಿವೆ. ಹೀಗಾಗಿಯೇ ಸ್ವಾತಂತ್ರ್ಯ ಬಂದು 69 ವರ್ಷಗಳು ಕಳೆದರೂ ಅರ್ಧದಷ್ಟು ದಲಿತ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ ಲಾಭ ಸಿಕ್ಕಿಲ್ಲ ಎಂದರು. 2014ರಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದಾಗ ದಲಿತರ ಪರ ಸರ್ಕಾರ ಏನಾದರು ಮಾಡಬಹುದೆಂಬ ವಿಶ್ವಾಸವಿತ್ತು. ಆದರೆ ಈವರೆಗೆ ದಲಿತರಿಗೆ ಸಂಬಂಧಪಟ್ಟ ಮಸೂದೆಯೂ ಪಾಸ್ ಆಗಿಲ್ಲ ಎಂದು ಬಿಎಸ್ಪಿ ನಾಯಕಿ ಟೀಕಿಸಿದರು.
ಈ ವೇಳೆ ಮಾತನಾಡಿದ ಬಿಹಾರ ಸಂಸದ ಶರದ್ ಯಾದವ್ ಅವರು, ಸರ್ಕಾರಗಳು ಗೋ ರಕ್ಷಕರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಸರ್ಕಾರ ಯಾಕೆ ಈ ಗೋ ರಕ್ಷಕ ಗುಂಪುಗಳನ್ನು ನಿಷೇಧಿಸಬಾರದು ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.