ಕಾಶ್ಮೀರದ ಗಲಭೆ ಹಿಂದೆ ಪಾಕ್, ಅಭದ್ರತೆ ಸೃಷ್ಟಿಗೆ ಯತ್ನ: ರಾಜನಾಥ್ ಸಿಂಗ್
ಪಾಕಿಸ್ತಾನದ ಕುಮ್ಮಕ್ಕಿನಿಂದಾಗಿ ಕಾಶ್ಮೀರ ಗಲಭೆ ತೀವ್ರ ಸ್ವರೂಪ ಪಡೆಯಲು ಕಾರಣವಾಯಿತು. ಭಾರತದಲ್ಲಿ ವಿನಾಕಾರಣ ಅಭದ್ರತೆ ಸೃಷ್ಟಿಸಲು ಪಾಕಿಸ್ತಾನ ಯತ್ನಿಸುತ್ತಿದೆ...

ನವದೆಹಲಿ: ಪಾಕಿಸ್ತಾನದ ಕುಮ್ಮಕ್ಕಿನಿಂದಾಗಿ ಕಾಶ್ಮೀರ ಗಲಭೆ ತೀವ್ರ ಸ್ವರೂಪ ಪಡೆಯಲು ಕಾರಣವಾಯಿತು. ಭಾರತದಲ್ಲಿ ವಿನಾಕಾರಣ ಅಭದ್ರತೆ ಸೃಷ್ಟಿಸಲು ಪಾಕಿಸ್ತಾನ ಯತ್ನಿಸುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಜನಾಥ್ ಸಿಂಗ್ ಪಾಕಿಸ್ತಾನ ಭಾರತದಲ್ಲಿ ಅಭದ್ರತೆ ಸೃಷ್ಟಿಸಲು ಗಡಿ ಪ್ರದೇಶ ಕಾಶ್ಮೀರವನ್ನು ಗುರಿಯಾಗಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಶ್ಮೀರ ಬಿಕ್ಕಟ್ಟು ಪರಿಸ್ಥಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಶೀಲಿಸಿದ್ದಾರೆ. ಜತೆಗೆ ಕ್ರಮಕ್ಕೂ ಸೂಚಿಸಿದ್ದು, ಈ ಬಗ್ಗೆ ವರದಿ ಪಡೆದುಕೊಳ್ಳುತ್ತಿದ್ದಾರೆ ಎಂದರು. ಇನ್ನು ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸದನಕ್ಕೆ ಸ್ಪಷ್ಟಪಡಿಸಿದರು.
ಇದೇ ವೇಳೆ ವಿಪಕ್ಷಗಳು ಗುಜರಾತ್ ನಲ್ಲಿ ದಲಿತರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಧ್ವನಿ ಎತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ದಲಿತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ನಾಲ್ವರು ಪೊಲೀಸರ ವಿರುದ್ಧ ಕ್ರಮಕೈಗೊಂಡು ಅವರನ್ನು ಅಮಾನತು ಮಾಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


