ಸಂಸತ್ ಭದ್ರತಾ ತಪಾಸಣಾ ವಿಡಿಯೋ ವಿವಾದ: ಭೇಷರತ್ ಕ್ಷಮೆಯಾಚಿಸಿದ ಆಪ್ ಸಂಸದ
ಸಂಸತ್ ಭದ್ರತಾ ತಪಾಸಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿವಾದಾತ್ಮಕ ವಿಡಿಯೋ ಚಿತ್ರೀಕರಿಸಿ, ಅದನ್ನು ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದ...

Published On :
ನವದೆಹಲಿ: ಸಂಸತ್ ಭದ್ರತಾ ತಪಾಸಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿವಾದಾತ್ಮಕ ವಿಡಿಯೋ ಚಿತ್ರೀಕರಿಸಿ, ಅದನ್ನು ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ ಮಾನ್ ಅವರು ಶುಕ್ರವಾರ ಭೇಷರತ್ ಕ್ಷಮೆಯಾಚಿಸಿದ್ದಾರೆ.
2001ರಲ್ಲಿ ಉಗ್ರರ ದಾಳಿಗೆ ತುತ್ತಾಗಿದ್ದ ಸಂಸತ್ ಭವನದಲ್ಲಿ ಭದ್ರತಾ ತಪಾಸಣಾ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ವಿಡಿಯೋ ಮಾಡಿದ ಪ್ರಕರಣ ಇಂದು ಸಂಸತ್ ಕಲಾಪಗಳಲ್ಲೂ ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು.
ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಂದ ಬುಲಾವ್ ಬಂದ ಬಳಿಕ ಭೇಷರತ್ ಕ್ಷಮಾಯಾಚನೆ ಮಾಡುವುದಾಗಿ ಆಪ್ ಸಂಸದ ಹೇಳಿದ್ದು, ಇಂತಹ ಘಟನೆ ಪುನರಾವರ್ತನೆ ಆಗುವುದಿಲ್ಲ ಎಂಬುದಾಗಿ ಭರವಸೆ ನೀಡಿದ್ದಾರೆ. ಈ ಮಧ್ಯೆ ಭಗವಂತ ಮಾನ್ ವಿರುದ್ಧ ಸಂಸತ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಅಪಾಯಕ್ಕೆ ಒಡ್ಡಲು ನಾನೆಂದೂ ಬಯಸಿರಲಿಲ್ಲ. ನಾನು ಲಿಖಿತವಾಗಿಯೇ ಕ್ಷಮಾಯಾಚನೆ ಮಾಡಿದ್ದೇನೆ’ ಎಂದು ಮಾನ್ ತಿಳಿಸಿದರು.
‘ನಾನು ಲೋಕಸಭಾ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ವಿವರಣೆ ನೀಡಲು ನನಗೆ ಒಂದು ಅವಕಾಶ ನೀಡಬೇಕು ಎಂದು ಕೋರಿದ್ದೇನೆ. ಸಂಸತ್ತಿನ ಭದ್ರತೆಯನ್ನು ಅಪಾಯಕ್ಕೆ ತಳ್ಳುವ ಉದ್ದೇಶ ನನಗೆ ಇರಲಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ’ಎಂದು ಮಾನ್ ಹೇಳಿದರು.
ಇನ್ನು ಮಾನ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಿತ್ರಾ ಮಹಾಜನ್ ಅವರು ನನ್ನನ್ನು ಭೇಟಿ ಮಾಡಿದಾಗ ಅವರು (ಮಾನ್) ಕ್ಷಮೆಯಾಚನೆಗೆ ಸಿದ್ಧರಿರುವುದಾಗಿ ತಿಳಿಸಿದರು. ಆದರೆ ವಿಷಯವು ಕೇವಲ ಕ್ಷಮಾಯಾಚನೆಯಿಂದ ಇತ್ಯರ್ಥವಾಗುವಂತಹುದಲ್ಲ. ಸಂಸತ್ತಿನ ಎಲ್ಲಾ ಸದಸ್ಯರೂ ಸಿಟ್ಟಿಗೆದ್ದಿದ್ದಾರೆ. ಇದು ಸಂಸತ್ತಿನ ಭದ್ರತೆಗೆ ಸಂಬಂಧಪಟ್ಟ ವಿಷಯ. ಸೂಕ್ತ ಕ್ರಮ ಕೈಗೊಳ್ಳಲೇಬೇಕಾಗುತ್ತದೆ. ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


