ದೇಶ

ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಗೆ ಅರ್ಜಿ

ಜಮ್ಮು-ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವಂತೆ ನಿರ್ದೇಶನ ನೀಡಲು ಮನವಿ ಮಾಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಗೆ ಅರ್ಜಿ
ಸುಪ್ರೀಂ ಕೋರ್ಟ್
Published On :

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವಂತೆ ನಿರ್ದೇಶನ ನೀಡಲು ಮನವಿ ಮಾಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯದ ಜನತೆಯ ಭದ್ರತೆ ಹಾಗೂ ರಕ್ಷಣೆಯ ದೃಷ್ಟಿಯಿಂದ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಹೇರಲು ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಿದೆ. 
ಉಗ್ರ ಬುರ್ಹಾನ್ ಮುಜಾಫರ್ ವನಿಯ ಹತ್ಯೆಯನ್ನು ಖಂಡಿಸಿ, ಕಾಶ್ಮೀರದಲ್ಲಿ ಉಂಟಾಗಿರುವ ಗಲಭೆಯ ಹಿನ್ನೆಲೆಯಲ್ಲಿ ಶಿವಸೇನೆ, ಎನ್ ಪಿಪಿ ಹಾಗೂ ಜೆಕೆಎನ್ ಪಿಪಿ ಪಕ್ಷಗಳೂ ಸಹ ರಾಜ್ಯಪಾಲರ ಆಡಳಿತಕ್ಕೆ ಕರೆ ನೀಡಿದ್ದವು. ಇನ್ನು ಉಗ್ರನ ಹತ್ಯೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಮೃತಪಟ್ಟವರ ಸಂಖ್ಯೆ 44 ಕ್ಕೆ ಏರಿಕೆಯಾಗಿದ್ದು 10 ಜಿಲ್ಲೆಗಳಲ್ಲೂ ಕರ್ಫ್ಯೂ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.