ಪ್ರಚೋದನಾತ್ಮಕ ಚಟುವಟಿಕೆ ನಿಲ್ಲಿಸಿ, ಕಾಶ್ಮೀರ ಬಿಟ್ಟು ತೊಲಗಿ; ಪಾಕಿಸ್ತಾನಕ್ಕೆ ಭಾರತದ ಕಠಿಣ ಎಚ್ಚರಿಕೆ
ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ "ಕರಾಳ ದಿನಾಚರಣೆ" ವಿರುದ್ಧ ಭಾರತ ಕೆಂಡಾಮಂಡಲವಾಗಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಕಠಿಣ ಎಚ್ಚರಿಕೆ ನೀಡಿದೆ.

ನವದೆಹಲಿ: ಹಿಜ್ಬುಲ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ "ಕರಾಳ ದಿನಾಚರಣೆ" ವಿರುದ್ಧ ಭಾರತ ಕೆಂಡಾಮಂಡಲವಾಗಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಕಠಿಣ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ವಿರೋಧಿಸಿ ಪಾಕಿಸ್ತಾನ ಜುಲೈ 20ರಂದು ನಡೆಸಿದ ಕರಾಳ ದಿನ ಆಚರಣೆಯನ್ನು ಭಾರತ ಸರ್ಕಾರ ಕಟು ಶಬ್ಧಗಳಿಂದ ಟೀಕಿಸಿದ್ದು, ಪಾಕಿಸ್ತಾನದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಪಾಕಿಸ್ತಾನದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿರುವ ಭಾರತ ಕಾಶ್ಮೀರದಲ್ಲಿ ಪಾಕಿಸ್ತಾನವೇ ಉಗ್ರರನ್ನು ಬೆಂಬಲಿಸುತ್ತಿರುವುದು ಇದರಿಂದ ಸಾಬೀತಾಗಿದೆ. ಪಾಕಿಸ್ತಾನ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸುವುದಕ್ಕೆ ಮುನ್ನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನು ಪಾಕಿಸ್ತಾನ ಮೊದಲು ಬಿಟ್ಟುಕೊಡಬೇಕು ಎಂದು ಹೇಳಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆಯ ವಿಷದ ಬೀಜ ಬಿತ್ತುವುದನ್ನು ಬಿಟ್ಟು ಆಕ್ರಮಿತ ಕಾಶ್ಮೀರವನ್ನು ಬಿಟ್ಟು ತೊಲಗಿ ಎಂದು ಖಾರವಾಗಿ ಹೇಳಿದೆ.
ಇನ್ನು ಲೋಕಸಭೆಯಲ್ಲಿಯೂ ಪಾಕಿಸ್ತಾನದ ವರ್ತನೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, "ವಿಶ್ವ ಸಂಸ್ಥೆಯಿಂದಲೇ ಉಗ್ರರು ಎಂದು ಘೋಷಿಸಲಾಗಿರುವ ಕೆಲವು ಭಯೋತ್ಪಾದಕರು ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ಹಾಗೂ ಬೃಹತ್ ರ‍್ಯಾಲಿಗಳನ್ನು ನಡೆಸುತ್ತಿದ್ದಾರೆ. ಈ ಹಿಂದೆ ಇದೇ ಉಗ್ರರು ಅಲ್‌ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್ ಹಾಗೂ ತಾಲಿಬಾನ್ ಮುಖಂಡ ಅಖ್ತರ್ ಮನ್ಸೂರ್ ಹತ್ಯೆ ವಿರೋಧಿಸಿಯೂ ಪ್ರತಿಭಟನೆ ನಡೆಸಿದ್ದರು. ಇವರನ್ನು ಪಾಕ್ ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದು ಭಾರತ ಕಟುಶಬ್ದಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಕಾಶ್ಮೀರ ಗಲಭೆಗೆ ಪಾಕಿಸ್ತಾನವೇ ನೇರ ಹೊಣೆ" ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


