ಆಂಧ್ರದಲ್ಲಿ ಭೀಕರ ಅಪಘಾತ: ಕರ್ನಾಟಕದ ಐವರು ಸಾವು
ಆಂಧ್ರದ ಅನಂತಪುರ ಜಿಲ್ಲೆ ಮುದಿಗುಬ್ಬ ತಾಲೂಕಿನ ಸಂಕೇಪಲ್ಲಿ ಬಳಿ ಲಾರಿ ಮತ್ತು ಟವೇರಾವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು...

ಅನಂತಪುರ: ಆಂಧ್ರದ ಅನಂತಪುರ ಜಿಲ್ಲೆ ಮುದಿಗುಬ್ಬ ತಾಲೂಕಿನ ಸಂಕೇಪಲ್ಲಿ ಬಳಿ ಲಾರಿ ಮತ್ತು ಟವೇರಾ ವಾಹನ ನಡುವೆ ಇಂದು ಬೆಳಗಿನಜಾವ ಭೀಕರ ಅಪಘಾತ ಸಂಭವಿಸಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದವರು ಟವೇರಾ ವಾಹನದಲ್ಲಿ ತಿರುಪತಿಗೆ ತೆರಳುತ್ತಿದ್ದರು. ಈ ವೇಳೆ ಸಂಕೇಪಲ್ಲಿ ಗ್ರಾಮದ ಬಳಿ ಟವೇರಾ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಗು, ಮಹಿಳೆ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


