ದೇಶ

ಮಹಾರಾಷ್ಟ್ರದಲ್ಲಿ ಮತ್ತೋರ್ವ ಶಂಕಿತ ಇಸೀಸ್ ಉಗ್ರನ ಬಂಧನ

ಮಹಾರಾಷ್ಟ್ರದಲ್ಲಿ ಕೇರಳ ಪೊಲೀಸರು ಹಾಗೂ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳ ಪಡೆ ಥಾಣೆಯಲ್ಲಿ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ನ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತೋರ್ವ ಶಂಕಿತ ಇಸೀಸ್ ಉಗ್ರನ ಬಂಧನ
ಮಹಾರಾಷ್ಟ್ರದಲ್ಲಿ ಮತ್ತೋರ್ವ ಶಂಕಿತ ಇಸೀಸ್ ಉಗ್ರನ ಬಂಧನ
Published On :

ಮುಂಬೈ: ಮಹಾರಾಷ್ಟ್ರದಲ್ಲಿ ಕೇರಳ ಪೊಲೀಸರು ಹಾಗೂ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳ ಪಡೆ ಥಾಣೆಯಲ್ಲಿ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ನ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ಒಂದು ತಿಂಗಳ ಅವಧಿಯಲ್ಲಿ ನಡೆಯುತ್ತಿರುವ ಎರಡನೇ ಪ್ರಕರಣ ಇದಾಗಿದ್ದು, ಇದಕ್ಕೂ ಮುನ್ನ 31 ವರ್ಷದ ವ್ಯಕ್ತಿಯೋರ್ವನನ್ನು ಇಸೀಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಬಂಧಿತ ವ್ಯಕ್ತಿ ಫಾರೂಕ್ ಎಂಬ ಮತ್ತೋರ್ವ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದ.

ಜು.29 ರಂದು ಇಸೀಸ್ ಉಗ್ರ ಸಂಘಟನೆಯ ಬೆಂಬಲಿಗರ ಮೇಲೆ ದಾಳಿ ನಡೆಸಿದ್ದ ಎನ್ಐಎ, ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 11 ಜನ ಶಂಕಿತ ಉಗ್ರರನ್ನು ಬಂಧಿಸಿತ್ತು. ಈಗ ಇಂಥದ್ದೇ ಮತ್ತೊಂದು ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.