ಗುಜರಾತ್ ನಲ್ಲಿ ದಲಿತರ ಮೇಲೆ ದೌರ್ಜನ್ಯ: ಪ್ರಧಾನಿ ಮೌನವನ್ನು ಪ್ರಶ್ನಿಸಿದ ಕೇಜ್ರಿವಾಲ್
ಗುಜರಾತ್ ನಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ನವದೆಹಲಿ: ಗುಜರಾತ್ ನಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಮೌನ ವಹಿಸಿರುವುದು, ದೌರ್ಜನ್ಯಗಳಿಗೆ ಬಿಜೆಪಿ ನಾಯಕತ್ವದ ಬೆಂಬಲ ಇದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಮೃತಪಟ್ಟ ಗೋವಿನ ಚರ್ಮ ಸುಲಿಯುತ್ತಿದ್ದ ವೇಳೆ ಗೋ ರಕ್ಷಾ ಸಮಿತಿಯ ಕಾರ್ಯಕರ್ತರಿಂದ ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕರನ್ನು ಭೇಟಿ ಮಾಡಲು ಅರವಿಂದ್ ಕೇಜ್ರಿವಾಲ್ ಶುಕ್ರವಾರ ಗುಜರಾತ್ ಗೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಕೇಜ್ರಿವಾಲ್ ಈ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ್ದಾರೆ. ದಲಿತರ ಮೇಲೆ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಕೇಜ್ರಿವಾಲ್ ಗುಜರಾತ್ ಸರ್ಕಾರವನ್ನು ಹೊಣೆಯನ್ನಾಗಿ ಮಾಡಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


