ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಶಾಂತಿ ನೆಲೆಸಲಿ, ನಂತರ ಮಾತುಕತೆ: ರಾಜನಾಥ್ ಸಿಂಗ್
ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿ ಅವಲೋಕನಕ್ಕಾಗಿ ಖುದ್ದು ಕಾಶ್ಮೀರ ಕಣಿವೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಶಾಂತಿ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿ ಅವಲೋಕನಕ್ಕಾಗಿ ಖುದ್ದು ಕಾಶ್ಮೀರ ಕಣಿವೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು. ಬಳಿಕ ಕಾಶ್ಮೀರಿಗರ ಜತೆ ಮಾತುಕತೆ ಮೂಲಕ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಭಯೋತ್ಪಾದನೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಹಕರಿಸುವಂತೆ ಎಲ್ಲರಿಗೂ ಮನವಿ ಮಾಡಿದರು.
ಇದೇ ವೇಳೆ ಪಾಕಿಸ್ತಾನ ವಿರುದ್ಧ ಕಿಡಿಕಾರಿದ ರಾಜನಾಥ್ ಸಿಂಗ್, ಸ್ವತಃ ಭಯೋತ್ಪಾದನೆಯಿಂದ ನಲುಗುತ್ತಿದೆ. ಈಗಿದ್ದು ಕಾಶ್ಮೀರದಲ್ಲಿ ಹಿಂಸೆಗೆ ಕುಮ್ಮಕ್ಕು ನೀಡುತ್ತಿದೆ. ಪಾಕಿಸ್ತಾನ ತನ್ನ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು ಎಂಬ ವಾದವನ್ನೇ ಮತ್ತೆ ಪ್ರತಿಪಾದಿಸಿದರು.
ಇನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ್ ಮುಫ್ತಿ ಅವರೊಂದಿಗೆ ದೀರ್ಘ ಸಮಾಲೋಚನೆ ನಡೆಸಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಭದ್ರತಾ ಪಡೆಗೆ ಪೆಲ್ಲೆಟ್ ಗನ್ ಬಳಸಬೇಡಿ ಎಂದು ರಾಜನಾಥ್ ಸಲಹೆ
ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೆಲ್ಲೆಟ್ ಗನ್ ಬಳಸಬೇಡಿ ಎಂದು ರಾಜನಾಥ್ ಸಿಂಗ್ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


