ದೇಶ

ಕ್ರಾಸಿಂಗ್ ಬಳಿ ರೈಲಿಗೆ ಸ್ಕೂಲ್ ಬಸ್ ಡಿಕ್ಕಿ: 8 ಮಕ್ಕಳ ದುರ್ಮರಣ

ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಕ್ರಾಸಿಂಗ್ ಬಳಿ ರೈಲಿಗೆ ಸ್ಕೂಲ್ ಬಸ್ ಡಿಕ್ಕಿ: 8 ಮಕ್ಕಳ ದುರ್ಮರಣ
ಶಾಲಾ ಬಸ್(ಸಂಗ್ರಹ ಚಿತ್ರ)
Published On :

ಭಾದೋಹಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಟೆಂಡರ್ ಹಾರ್ಟ್ ಶಾಲೆಗೆ ಸೇರಿದ ಮಿನಿ ಬಸ್ 10 ವರ್ಷದೊಳಗಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಟಕ್ ಮತ್ತು ಮಾದೋಸಿಂಗ್ ರೈಲ್ವೆ ನಿಲ್ದಾಣದ 26ನೇ ಗೇಟ್ ಬಳಿ ರೈಲ್ವೆ ಕ್ರಾಸಿಂಗ್ ಬಳಿ ವಾರಣಾಸಿ-ಅಲಹಾಬಾದ್ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದ್ದು ಈ ದುರ್ಘಟನೆ ಸಂಭವಿಸಿದೆ.

ಈ ದುರ್ಘಟನೆಯಲ್ಲಿ 8 ಶಾಲಾ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಡಿಎಂ ಮತ್ತು ಎಸ್ಪಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.