ದೇಶ

ಪಾಕ್ ನಲ್ಲಿರುವ ಭಾರತದ ರಾಜತಾಂತ್ರಿಕ ಅಧಿಕಾರಿಗಳ ಮಕ್ಕಳನ್ನು ಭಾರತಕ್ಕೆ ಕಳುಹಿಸಿ: ಕೇಂದ್ರ

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳ ಮಕ್ಕಳನ್ನು ವಾಪಸ್ ಭಾರತಕ್ಕೆ ಕಳುಹಿಸಿ ಎಂದು ಕೇಂದ್ರ ...

ಪಾಕ್ ನಲ್ಲಿರುವ ಭಾರತದ ರಾಜತಾಂತ್ರಿಕ ಅಧಿಕಾರಿಗಳ ಮಕ್ಕಳನ್ನು ಭಾರತಕ್ಕೆ ಕಳುಹಿಸಿ: ಕೇಂದ್ರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳ ಮಕ್ಕಳನ್ನು ವಾಪಸ್ ಭಾರತಕ್ಕೆ ಕಳುಹಿಸಿ ಎಂದು ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಹೇಳಿದೆ.

ನೋ ಸ್ಕೂಲ್ ಗೋಯಿಂಗ್ ಮಿಷನ್ ಯೋಜನೆ ಅಡಿಯಲ್ಲಿ ರಾಯಭಾರಿ ಅಧಿಕಾರಿಗಳು ಶಾಲೆಗೆ ಹೋಗುವ ತಮ್ಮ ಮಕ್ಕಳ ಜೊತೆ ಪಾಕಿಸ್ತಾನದಲ್ಲಿ ಇರಲು ಅವಕಾಶವಿಲ್ಲ, ಆದರೆ, ತಮ್ಮ ಸಂಗಾತಿ ಮಾತ್ರ ಅಧಿಕಾರಿಗಳ ಜೊತೆ ವಾಸಿಸಬಹುದಾಗಿದೆ.

ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಸುಮಾರು 60 ಮಕ್ಕಳು ಮುಂದಿನ ದಿನಗಳಲ್ಲಿ ಪಾಕಿಸ್ತಾನ ಶಾಲೆಗಳಲ್ಲಿ ವಿಧ್ಯಾಭ್ಯಾಸ ನಡೆಸುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2014ರ ಡಿಸೆಂಬರ್ ನಲ್ಲಿ ನಡೆದ ಪೇಶಾವರ ಶಾಲೆ ದಾಳಿಯ ನಂತರ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಭಾರತೀಯ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಿದೆ.ಜೊತೆಗೆ  ಪಾಕಿಸ್ತಾನದಲ್ಲಿ ಭಾರತೀಯರ ಮಕ್ಕಳು ಎಲ್ಲಿಯೂ ಸ್ವತಂತ್ರ್ಯವಾಗಿ ಓಡಾಡುವಂತಿಲ್ಲ. ಶಾಲೆಗಳು ವಿದ್ಯಾರ್ಥಿಗಳನ್ನು ಟ್ರಿಪ್ ಗೆ ಕರೆದುಕೊಂಡು ಹೋಗಬೇಕಾದ ಸಂದರ್ಭ ಬಂದರೇ, ಶಾಲೆ ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯದ ಅನುಮತಿ ಪಡೆಯಬೇಕು.

ತಮ್ಮ ಮಕ್ಕಳ ವಿಧ್ಯಾಭ್ಯಾಸ ಮುಖ್ಯ ಎಂದಾದರೇ ಅಧಿಕಾರಿಗಳು ವಾಪಸ್ ಭಾರತಕ್ಕೆ ಬರಬಹುದು ಇಲ್ಲವೇ, ತಮ್ಮ ಮಕ್ಕಳನ್ನು ಭಾರತಕ್ಕೆ ಕಡ್ಡಾಯವಾಗಿ ಕಳುಹಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ.

ಈ ಸಂಬಂಧ ಭಾರತೀಯ ರಾಯಬಾರ ಕಚೇರಿಯು ಪಾಕ್ ವಿದೇಶಾಂಗ ಕಾರ್ಯಾಲಯ ಮತ್ತು ಅಲ್ಲಿನ ಶಾಲೆಗಳ ಅಡಳಿತ ಮಂಡಳಿಗಳ ಜೊತೆ ಚರ್ಚೆ ನಡೆಸಿದ್ದ, ಎರಡು ವಿದೇಶಾಂಗ ಕಾರ್ಯಾಲಯಗಳು ಪಟ್ಟು ಸಡಿಲಿಸುವಂತೆ ಭಾರತ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು, ಆದರೆ ಕೇಂದ್ರ ಸರ್ಕಾರ ಈ ಮನವಿಯನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.