ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಎನ್ ಡಿಎ ಸರ್ಕಾರ ವಿಫಲ, ಆದರೆ ಮೋದಿ ಕೊನೆಯ ವಿಶ್ವಾಸ: ಉದ್ಧವ್ ಠಾಕ್ರೆ
ಕೇಂದ್ರ ಸರ್ಕಾರ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಭರವಸೆಯನ್ನು ನಿಜಗೊಳಿಸುವಲ್ಲಿ ವಿಫಲವಾಗಿದೆ ಎಂದು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.

ಮುಂಬೈ: ಕೇಂದ್ರ ಸರ್ಕಾರ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಭರವಸೆಯನ್ನು ನಿಜಗೊಳಿಸುವಲ್ಲಿ ವಿಫಲವಾಗಿದೆ ಎಂದು ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಉಗ್ರವಾದದ ನಿರ್ಮೂಲನೆ ವಿಷಯದಲ್ಲಿ ಎನ್ ಡಿ ಎ ಸರ್ಕಾರ ವಿಫಲವಾಗಿದ್ದರೂ, ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಕೊನೆಯ ವಿಶ್ವಾಸವಾಗಿದ್ದು, ಭರವಸೆ ನೀಡಿದಂತೆ ನಡೆದುಕೊಳ್ಳಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದಿದ್ದಾರೆ ಉದ್ಧವ್ ಠಾಕ್ರೆ.
ನಾನು ಭಯೋತ್ಪಾದನೆ ನಿಗ್ರಹ ವಿಷಯದಲ್ಲಿ ಪರಿಣಿತ ಅಲ್ಲದೆ ಹೋದರೂ, ಭಯೋತ್ಪಾದನೆ ವಿಷಯದಲ್ಲಿ ಕೇಂದ್ರ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದ್ದು, ದೇಶ ಹಾಗೂ ಜನತೆಯ ನಾಡಿ ಮಿಡಿತವನ್ನು ಅರ್ಥವಾಗುತ್ತದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯಗಳ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದರೆ ಎರಡು ವರ್ಷಗಳನ್ನು ಪೂರೈಸಿರುವ ಎನ್ ಡಿಎ ಸರ್ಕಾರಕ್ಕೆ ಸುಲಭವಾಗಿ ಉಗ್ರರರನ್ನು ನಿಗ್ರಹ ಮಾಡುವುದಕ್ಕೆ ಸಾಧ್ಯವಿತ್ತು ಎಂದು ಉದ್ಧವ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.
ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಉದ್ಧವ್ ಠಾಕ್ರೆ, ಕಾಶ್ಮೀರದಲ್ಲಿ ಗಲಭೆ ಉಂಟಾಗಿರುವುದರ ಹಿಂದಿನ ಕಾರಣ ನಮಗೆಲ್ಲರಿಗೂ ತಿಳಿದಿದೆ. ಈ ಹಂತದಲ್ಲಿ ಬೋಧಿಸುವುದನ್ನೇ, ಜಾರಿಗೂ ತರಬೇಕೆಂಬ ನಮ್ಮ ಸಾಧು-ಸಂತರ ಮಾತುಗಳು ನೆನಪಿಗೆ ಬರುತ್ತಿವೆ. ಆದರೆ ಹೇಳುವುದನ್ನೇ ಮಾಡುವಂತಹ ನಾಯಕ ಭಾರತಕ್ಕೆ ಇನ್ನು ಸಿಕ್ಕಿಲ್ಲ ಎಂದು ಉದ್ಧವ್ ಠಾಕ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


