ಕೇಜ್ರಿವಾಲ್ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಗೆ ಜಾಮೀನು
ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್...

Published On :
ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಮಂಗಳೂರು ಜಾಮೀನು ಮಂಜೂರು ಮಾಡಿದೆ.
ರಾಜೇಂದ್ರ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿ ಐಎಎಸ್ ಅಧಿಕಾರಿಗೆ 1 ಲಕ್ಷ ರುಪಾಯಿ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ದೆಹಲಿ ಬಿಟ್ಟು ಹೋಗದಂತೆ ಮತ್ತು ಸಾಕ್ಷ್ಯ ನಾಶಪಡಿಸಿದಂತೆ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚಿಸಿದ್ದಾರೆ.
50 ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ರಾಜೇಂದ್ರ ಮತ್ತು ಖಾಸಗಿ ಕಂಪೆನಿಯೊಂದರ ಇತರರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
1989ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರಾಜೇಂದ್ರ ಕುಮಾರ್ ಅವರು ಟೆಂಡರ್ ಕರೆಯದೆ ಖಾಸಗಿ ಕಂಪೆನಿಯೊಂದಕ್ಕೆ ಗುತ್ತಿಗೆ ನೀಡಿ 50 ಕೋಟಿ ರುಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


