ದೇಶ

ಕಾರ್ಗಿಲ್ ವಿಜಯ್ ದಿವಸ್: ಯೋಧರ ವೀರೋಚಿತ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದ ಪ್ರಧಾನಿ ಮೋದಿ

ಜು.26, ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದು...

ಕಾರ್ಗಿಲ್ ವಿಜಯ್ ದಿವಸ್: ಯೋಧರ ವೀರೋಚಿತ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದ ಪ್ರಧಾನಿ ಮೋದಿ
ಕಾರ್ಗಿಲ್ ವಿಜಯ್ ದಿವಸ್(ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ಜು.26, ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದು, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ನ್ನು ಟ್ವಿಟರ್ ನಲ್ಲಿ ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಯೋಧರ ವೀರೋಚಿತ ತ್ಯಾಗಗಳು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯೋಧರ ಹೋರಾಟವನ್ನು ನೆನಪಿಸಿಕೊಂಡಿರುವ ಪ್ರಧಾನಿ, 1999 ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧರ ವೀರತ್ವ ಹಾಗು ತ್ಯಾಗಗಳನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.


ದೇಶದೊಳಗೆ ನುಸುಳಿದ್ದವರಿಗೆ ಸರಿಯಾದ ಉತ್ತರ ನೀಡಿದ್ದ ಯೋಧರ ಶೌರ್ಯವನ್ನು ದೇಶ ಸದಾ ನೆನಪಿಸಿಕೊಳ್ಳುತ್ತದೆ ಎಂದು ಮೋದಿ ಹೇಳಿದ್ದಾರೆ. ಕಾರ್ಗಿಲ್ ಯುದ್ಧವನ್ನು ಸ್ಮರಿಸಿರುವ ಪ್ರಧಾನಿ ಮೋದಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿ ಎ ಸರ್ಕಾರದ ಸದೃಢ ನಾಯಕತ್ವವನ್ನೂ ಸ್ಮರಿಸಿದ್ದಾರೆ.

1999 ರ ಯುದ್ಧದಲ್ಲಿ ಭಾರತದ ಗೆಲುವಿಗೆ ಕಾರಣವಾದ ರಾಜಕೀಯ ನಾಯಕತ್ವವನ್ನೂ ನಾವು ಇಂದು ಹೆಮ್ಮೆಯಿಂದ ಸ್ಮರಿಸುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.