ಪೆಲ್ಲೆಟ್ ಗನ್ ಗಳಿಗೆ ಪರ್ಯಾಯ ಕಂಡುಕೊಳ್ಳಲು 7 ಸದಸ್ಯರ ಸಮಿತಿ ರಚನೆ
ಕಾಶ್ಮೀರದಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳನ್ನು ಬಳಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ಮುಂದಾಗಿದೆ.

ನವದೆಹಲಿ: ಕಾಶ್ಮೀರದಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳನ್ನು ಬಳಸಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಕಂಡುಕೊಳ್ಳಲು ಮುಂದಾಗಿದೆ.
ರಬ್ಬರ್ ಪೆಲ್ಲೆಟ್ ಗಳಿಗೆ ವಿರೋಧ ವ್ಯಕ್ತವಾಗಿ ಒತ್ತಡ ಹೆಚ್ಚಾದ ಪರಿಣಾಮ, ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, 7 ಸದಸ್ಯರ ಸಮಿತಿಯನ್ನು ರಚಿಸಿದ್ದು ಪೆಲ್ಲೆಟ್ ಗನ್ ಗಳಿಗೆ ಪರ್ಯಾಯವಾದುದ್ದನ್ನು ಸೂಚಿಸಲು ಅನುಮತಿ ನೀಡಿದ್ದಾರೆ.
ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಟಿವಿಎಸ್ ಎನ್ ಪ್ರಸಾದ್ ನೇತೃತ್ವದ ಸಮಿತಿ 2 ತಿಂಗಳ ಒಳಗಾಗಿ ಗೃಹ ಸಚಿವರಿಗೆ ವರದಿ ನೀಡಲಿದೆ. ಉಗ್ರನ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಭಾರತೀಯ ಸೇನೆ ಪ್ರತಿಭಟನಾಕಾರರ ವಿರುದ್ಧ ಹಾನಿಕಾರಕವಲ್ಲದ ಶಾಸ್ತ್ರವಾದ ಪೆಲ್ಲೆಟ್ ಗನ್ ಗಳನ್ನು ಬಳಕೆ ಮಾಡಿತ್ತು. ಪೆಲ್ಲೆಟ್ ಗುಂಡೇಟಿಗೆ ಗುರಿಯಾದವರಿಗೆ ದೃಷ್ಟಿದೋಷ ಉಂಟಾದ ಹಿನ್ನೆಲೆಯಲ್ಲಿ ಪೆಲ್ಲೆಟ್ ಗನ್ ಬಳಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಪೆಲ್ಲೆಟ್ ಗನ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಗೃಹ ಸಚಿವ ರಾಜನಾಥ್ ಸಿಂಗ್ ಕಾಶ್ಮೀರ ಭೇಟಿ ವೇಳೆ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


