ಮರಾಠವಾಡದಲ್ಲಿ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ನಾಪತ್ತೆ, ಇಸೀಸ್ ಸೇರ್ಪಡೆಯಾಗಿರುವ ಶಂಕೆ: ಶಿವಸೇನೆ
ಮಹಾರಾಷ್ಟ್ರದಲ್ಲಿ ಕಣ್ಮರೆಯಾಗಿರುವ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಕಣ್ಮರೆಯಾಗಿರುವ ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ವಿಧಾನಸಭೆಯಲ್ಲಿ ಶಿವಸೇನೆ ಈ ಕುರಿತು ಮಾಹಿತಿ ನೀಡಿದ್ದು, ಮರಾಠವಾಡ ಪ್ರದೇಶದಿಂದ ಸುಮಾರು ನೂರಕ್ಕೂ ಹೆಚ್ಚು ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆ ಸೇರಿದ್ದಾರೆ ಎಂದು ಶಿವಸೇನೆ ಶಾಸಕ ರಘು ಪಾಟೀಲ್ ಹೇಳಿದ್ದಾರೆ. ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರಿದ್ದಾರೆ ಎಂದು ಹೇಳಿರುವ ರಘು ಪಾಟೀಲ್, ಅಸಾವುದ್ದೀನ್ ಓವೈಸಿ ನೇತೃತ್ವದ ಎಂಐಎಂ ಪಕ್ಷ ಇಸೀಸ್ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದು, ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಕ್ಕೆ ಇತ್ತೀಚೆಗಷ್ಟೇ ಮರಾಠವಾಡದಿಂದ ಪೊಲೀಸರು ಯುವಕನೋರ್ವನನ್ನು ಇಸೀಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಬಂಧಿಸಿದ್ದ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ್ದು, ಪೊಲೀಸರಿಗೂ ಸಹ ನಾಪತ್ತೆಯಾಗಿರುವ ಮುಸ್ಲಿಂ ಯುವಕರು ಇಸೀಸ್ ಉಗ್ರ ಸಂಘಟನೆಗೆ ಸೇರ್ಪಡೆಯಾಗಿರುವ ಬಗ್ಗೆ ಶಂಕೆ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


