ದೇಶ

ಯುಪಿಎ ಎಷ್ಟು ಬಾರಿ ಬೆಲೆ ಏರಿಕೆ ತಡೆಹಿಡಿದಿದೆ ಹೇಳಿ: ರಾಹುಲ್ ಗೆ ಜೇಟ್ಲಿ ತಿರುಗೇಟು

ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು...

ಯುಪಿಎ ಎಷ್ಟು ಬಾರಿ ಬೆಲೆ ಏರಿಕೆ ತಡೆಹಿಡಿದಿದೆ ಹೇಳಿ: ರಾಹುಲ್ ಗೆ ಜೇಟ್ಲಿ ತಿರುಗೇಟು
ಅರುಣ್ ಜೇಟ್ಲಿ
Published On :
ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರಶ್ನಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಈ ಹಿಂದಿನ ಯುಪಿಎ ಸರ್ಕಾರ ಎಷ್ಟು ಬಾರಿ ಬೆಲೆ ಏರಿಕೆ ತಡೆಹಿಡಿದೆ ಎಂಬುದನ್ನು ಹೇಳಿ ಎಂದಿದ್ದಾರೆ.
ಇಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಜೇಟ್ಲಿ, ಎನ್ ಡಿ ಎ ಸರ್ಕಾರ ಹಣದುಬ್ಬರವನ್ನು ಕಡಿಮೆ ಮಾಡಿದ ಎಂದು ಹೇಳಿ ಅಂಕಿ ಸಂಖ್ಯೆಗಳ ಸಮೇತ ವಿವರ ನೀಡಿದರು. ಅಲ್ಲದೆ ಉತ್ತಮ ಮಾನ್ಸೂನ್ ಮಳೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಕಡಿಮೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಜೇಟ್ಲಿ, ಯಾವುದೆ ರೂಪದ ಬಡಾಯಿಯಿಂದ ಅಂಕಿ ಸಂಖ್ಯೆಗಳನ್ನು ಬದಲಿಸಲು ಸಾಧ್ಯವಿಲ್ಲ. ಯುಪಿಎ ಸರ್ಕಾರದಲ್ಲಿದ್ದ ಹಣದುಬ್ಬರ ಮತ್ತು ಈಗ ಇರುವ ಹಣದುಬ್ಬರಕ್ಕೂ ಹೋಲಿಕೆ ಮಾಡಿ ಎಂದು ರಾಹುಲ್ ಗಾಂಧಿಗೆ ಸಲಹೆ ನೀಡಿದರು.
ಮೋದಿ ವಿರುದ್ಧದ ರಾಹುಲ್ ಹೇಳಿಕೆಯನ್ನು ಪ್ರಸ್ತಾಪಿಸಿದ ಜೇಟ್ಲಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಯುಪಿಎ ಸರ್ಕಾರದ ಆಡಳಿತಾವಧಿಯ ಆತ್ಮಾವಲೋಕನ ಮಾಡಿಕೊಂಡು ಎಷ್ಟು ಬಾರಿ ಬೆಲೆ ಏರಿಕೆಯನ್ನು ತಡೆಹಿಡಿದಿದ್ದೀರಿ ಎಂಬುವುದನ್ನು ಪತ್ರದ ಮೂಲಕ ಪುರಾವೆ ನೀಡಿ ಎಂದು ಜೇಟ್ಲಿ ತಿರುಗೇಟು ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ್ದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಈ ಪ್ರಧಾನಿ ಮೋದಿ ಅವರು ಮೌನವಹಿಸಿರುವುದು ಏಕೆ? ಎಂದು ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.