ದೇಶ

ಮಾಯಾವತಿ, ಇತರೆ ಬಿಎಸ್ಪಿ ನಾಯಕರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ

ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಪಕ್ಷದ ಇತರೆ ಮೂವರು...

ಮಾಯಾವತಿ, ಇತರೆ ಬಿಎಸ್ಪಿ ನಾಯಕರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ
ಮಾಯಾವತಿ
Published On :
ಹಜಿಪುರ: ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಪಕ್ಷದ ಇತರೆ ಮೂವರು ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಿಹಾರದ ವೈಶಾಲಿ ಜಿಲ್ಲಾ ಕೋರ್ಟ್ ಗುರುವಾರ ಆದೇಶಿಸಿದೆ.
ಪ್ರಚೋದನಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಜಿಪುರ ನಿವಾಸಿ ಅಜಿತ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೈರಾಮ್ ಪ್ರಸಾದ್ ಅವರು, ಮಾಯಾವತಿ ಹಾಗೂ ಇತರೆ ಮೂವರು ನಾಯಕರಾದ ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸಿಮುದ್ದೀನ್ ಸಿದ್ದಿಖಿ, ಉತ್ತರ ಪ್ರದೇಶ ಘಟಕದ ಅಧ್ಯಕ್ಷ ರಾಮ್ ಅಚಲ್ ರಾಜಭರ್ ಮತ್ತು ರಾಜ್ಯ ಕಾರ್ಯದರ್ಶಿ ಮೇವಾಲಾಲ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಗರ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ.
ಮಾಯಾವತಿ ಮತ್ತು ಇತರೆ ಬಿಎಸ್ಪಿ ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಇದರಿಂದ ದೇಶದ ಐಕ್ಯತೆಗೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿದಾರ ವಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.