ದೇಶ

ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಲಿ ವ್ಯಕ್ತಿಯ ಕೈವಾಡ? ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಾಲಿಯನ್ ವ್ಯಕ್ತಿಯ ಕೈವಾಡವಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಸುಬ್ರಮಣಿಯನ್

ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇಟಲಿ ವ್ಯಕ್ತಿಯ ಕೈವಾಡ? ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Published On :

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ  ಹತ್ಯೆಯಲ್ಲಿ ಇಟಾಲಿಯನ್ ವ್ಯಕ್ತಿಯ ಕೈವಾಡವಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ಖ್ಯಾತಿಯ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಮಹಾತ್ಮ ಗಾಂಧಿ ಹತ್ಯೆಯ ಸಂಬಂಧ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಎಂದು ಪಟ್ಟು ಹಿಡಿದಿರುವ ಸುಬ್ರಮಣಿಯನ್ ಸ್ವಾಮಿ ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ನಾಥೂರಾಮ್ ಗೂಡ್ಸೆ ಅವರ ಗುಂಡಿಗೆ ಮಹಾತ್ಮ ಗಾಂಧಿ ಬಲಿಯಾಗಿದ್ದಾರೆ, ಆದರೆ ಹತ್ಯೆಗೆ ಬಳಸಿದ ಗನ್ ಇಟಲಿಯಿಂದ ಇಂಪೋರ್ಟ್ ಮಾಡಿರುವುದು ಎಂದು ತಿಳಿದು ಬಂದಿದೆ. ಹೀಗಾಗಿ ಮಹಾತ್ಮ ಗಾಂಧಿ ಹತ್ಯೆಗೂ ಹಾಗೂ ಇಟಲಿಯ ವ್ಯಕ್ತಿಗೂ ಸಂಬಂಧವಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಆಗಸ್ಟ್ 15 ರ ನಂತರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿವರಗಳನ್ನು ಬಹಿರಂಗ ಪಡಿಸುವುದಾಗಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.