ದೇಶ

ಸ್ವಾತಂತ್ರ್ಯ ದಿನಾಚರಣೆಯಂದು ದ್ರೋಣ್ ಮೂಲಕ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು ಉಗ್ರರ ಸಂಚು?

ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೋಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದ್ರೋಣ್ ...

ಸ್ವಾತಂತ್ರ್ಯ ದಿನಾಚರಣೆಯಂದು ದ್ರೋಣ್ ಮೂಲಕ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸಲು ಉಗ್ರರ ಸಂಚು?
ನರೇಂದ್ರ ಮೋದಿ
Published On :

ನವದೆಹಲಿ: ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆಯುವ  ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೋಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದ್ರೋಣ್ ಮೂಲಕ ದಾಳಿ ನಡೆಸಲು  ಉಗ್ರರ ತಂಡವೊಂದು ಸಂಚು ನಡೆಸುತ್ತಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಆಗಸ್ಟ್ 15 ರ ಬೆಳಗ್ಗೆ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ದೇಶದ ಜನತೆಯನ್ನುದ್ದೇಶಿಸಿ ಭಾಷಣ  ಮಾಡಲಿದ್ದಾರೆ. ಲಷ್ಕರ್ -ಇ-ತೋಯ್ಬಾ, ಜೈಶ್-ಇ- ಮೊಹಮದ್, ಐಸಿಸ್ ಸೇರಿದಂತೆ ಇನ್ನಿತರ ಉಗ್ರ ಸಂಘಟನೆಗಳು ಪಾಕಿಸ್ತಾನದ ಐಎಸ್ಐ ಬೆಂಬಲದೊಂದಿಗೆ ದಾಳಿ ನಡೆಸಲು ಸಂಚು ನಡೆಸುತ್ತಿವೆ.ಈ ಸಂಬಂಧ ಉಗ್ರರ ನಡುವೆ ದೂರವಾಣಿ ಮಾತುಕತೆ ನಡೆದಿದೆ ಎಂದು ಗುಪ್ತ ಚರ ಇಲಾಖೆ ತಿಳಿಸಿದೆ.

ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ವೇಳೆ ಮತ್ತಷ್ಟು ಭದ್ರತೆ ಹೆಚ್ಚಿಸಲು ವಿಶೇಷ ರಕ್ಷಣಾ ದಳಕ್ಕೆ ಸೂಚಿಸಲಾಗಿದೆ. ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳು ಸಭೆ ನಡೆಸಿದ್ದಾರೆ.ಮೋದಿ ಭಾಷಣ ಮಾಡುವ ಜಾಗದಲ್ಲಿ ಬುಲೆಟ್ ಪ್ರೂಫ್ ಮೇಲ್ಚಾವಣಿ ನಿರ್ಮಿಸಲು ನಿರ್ಧರಿಸಲಾಗಿದೆ.

ಇದಲ್ಲದೇ ದೇಶದ ಸೇನಾ ನೆಲೆ, ಮತ್ತು ಭಾರತೀಯ ಆರ್ಮಿ ಕ್ಯಾಂಪ್ ಗಳ ಮೇಲೂ ದಾಳಿ ನಡೆಸಲು ಉಗ್ರ ಸಂಘಟನೆಗಳು ಸಂಚು ನಡೆಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.