ದೇಶ

ಪುಣೆ: ನಿರ್ಮಾಣ ಹಂತದಲ್ಲಿದ್ದ 14 ಅಂತಸ್ಥಿನ ಕಟ್ಟಡ ಕುಸಿತ, 9 ಮಂದಿ ಸಾವು

ನಿರ್ಮಾಣ ಹಂತದಲ್ಲಿದ್ದ 14 ಅಂತಸ್ಥಿನ ಕಟ್ಟಡವೊಂದು ಕುಸಿದಿದ್ದರಿಂದ 9 ಜನ ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆ ಹೊರವಲಯದಲ್ಲಿ ನಡೆದಿದೆ...

ಪುಣೆ: ನಿರ್ಮಾಣ ಹಂತದಲ್ಲಿದ್ದ 14 ಅಂತಸ್ಥಿನ ಕಟ್ಟಡ ಕುಸಿತ, 9 ಮಂದಿ ಸಾವು
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಚಿತ್ರ
Published On :

ಪುಣೆ: ನಿರ್ಮಾಣ ಹಂತದಲ್ಲಿದ್ದ 14 ಅಂತಸ್ಥಿನ ಕಟ್ಟಡವೊಂದು ಕುಸಿದಿದ್ದರಿಂದ 9 ಜನ ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆ ಹೊರವಲಯದಲ್ಲಿ ನಡೆದಿದೆ.

14ನೇ ಅಂತಸ್ಥಿನಲ್ಲಿ ಕಟ್ಟಡದ ಸ್ಲಾಬ್ ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದಿದ್ದು ಅವಶೇಷದಡಿ ಸಿಲುಕಿ 9 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿರುವವರಿಗಾಗಿ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಟ್ಟದ ಕುಸಿದಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.