ಪ್ರತಿಭಟನೆ ನಿಯಂತ್ರಿಸಲು ಕಾಶ್ಮೀರದಲ್ಲಿ ಕರ್ಫ್ಯೂ ಜಾರಿ
ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಕಾಶ್ಮೀರದಲ್ಲಿ ಜು.29 ರಂದು ಕರ್ಫ್ಯೂ ವಿಧಿಸಲಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಕಾಶ್ಮೀರದಲ್ಲಿ ಜು.29 ರಂದು ಕರ್ಫ್ಯೂ ವಿಧಿಸಲಾಗಿದೆ.
ಶ್ರೀನಗರದ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ಹಾಗು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಜಘಾತುಕ ಶಕ್ತಿಗಳು ಸಮಸ್ಯೆ ಉಂಟು ಮಾಡಲು ಯತ್ನಿಸಿದ್ದು, ಇದನ್ನು ತಡೆಗಟ್ಟಲು ಜನತೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವನಿಯ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಜು.31 ರ ವರೆಗೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಪ್ರತಿಭಟನೆಯ ಅವಧಿಯಲ್ಲಿ ಜನರು ಸಂಜೆ 7 ಗಂಟೆ ನಂತರ ಶಾಪಿಂಗ್ ಇನ್ನಿತರ ಚಟುವಟಿಕೆಗಳನ್ನು ಪ್ರಾರಂಭಿಸಬಹುದು ಎಂದು ಪ್ರತ್ಯೇಕತಾವಾದಿಗಳು ಕರೆ ನೀಡಿದ್ದಾರೆ. ಅನಂತ್ ನಾಗ್ ಜಿಲ್ಲೆ ಸೇರಿದಂತೆ ದಕ್ಷಿಣ ಕಾಶ್ಮೀರದ ಮೂರೂ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


