ಪ್ರಸಕ್ತ ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರ: ಕೇಂದ್ರ ಸಚಿವ ನಖ್ವಿ ವಿಶ್ವಾಸ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಯಾದ ಜಿಎಸ್ ಟಿ ಯನ್ನು ಪ್ರಸಕ್ತ ಅಧಿವೇಶನದಲ್ಲೇ ಅಂಗೀಕರಿಸಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಸೂದೆಯಾದ ಜಿಎಸ್ ಟಿ ಯನ್ನು ಪ್ರಸಕ್ತ ಮುಂಗಾರು ಅಧಿವೇಶನದಲ್ಲೇ ಅಂಗೀಕರಿಸಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ವಿಶ್ವಾಸದಿಂದ ರಾಜ್ಯಸಭೆಯಲ್ಲಿ ಚರ್ಚೆಯಾಗಬೇಕಿರುವ ವಿಷಯಗಳ ಪಟ್ಟಿಯಲ್ಲಿ ಜಿಎಸ್ ಟಿ ಮಸೂದೆಯನ್ನು ಸೇರಿಸಲಾಗಿದೆ, ಜಿಎಸ್ ಟಿ ಮಸೂದೆಗೆ ಬೆಂಬಲ ಪಡೆಯುವುದಕ್ಕೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದೇವೆ ಎಂದು ನಖ್ವಿ ತಿಳಿಸಿದ್ದಾರೆ. " ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದ್ದು, ಜಿಎಸ್ ಟಿ ಮಸೂದೆಗೆ ಸಂಬಂಧಿಸಿದಂತೆ ಒಮ್ಮದ ತೀರ್ಮಾನಕ್ಕೆ ಬರಲು ಯತ್ನಿಸಲಾಗುತ್ತಿದೆ, ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆ ಇದೆ ಎಂದು ನಖ್ವಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


