ದೇಶ

ಉ.ಪ್ರದೇಶ ಚುನಾವಣೆ ಪ್ರಚಾರಕ್ಕೆ ರಾಹುಲ್ ಚಾಲನೆ, ನಂ.1 ರಾಜ್ಯ ಮಾಡುವ ಭರವಸೆ

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರಚಾರವನ್ನು ಚುರುಕುಗೊಳಿಸಿದ್ದು,...

ಉ.ಪ್ರದೇಶ ಚುನಾವಣೆ ಪ್ರಚಾರಕ್ಕೆ ರಾಹುಲ್ ಚಾಲನೆ, ನಂ.1 ರಾಜ್ಯ ಮಾಡುವ ಭರವಸೆ
ರಾಹುಲ್ ಗಾಂಧಿ
Published On :
ನವದೆಹಲಿ: 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರಚಾರವನ್ನು ಚುರುಕುಗೊಳಿಸಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ರಾಜ್ಯವನ್ನು ನಂಬರ್ 1 ರಾಜ್ಯ ಮಾಡುವುದಾಗಿ ಶುಕ್ರವಾರ ಭರವಸೆ ನೀಡಿದ್ದಾರೆ.
ಇಂದು ಲಖನೌನಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ರಾಹುಲ್ ಗಾಧಿ, ನಾವು ಒಗ್ಗಟ್ಟಿನಿಂದ ಹೋರಾಟ ಮಾಡಿ ರಾಜ್ಯವನ್ನು ನಂ.1 ಮಾಡುತ್ತೇನೆ ಎಂದರು. ಅಲ್ಲದೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದಿಕ್ಷಿತ್ ಅವರ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಹೊಸ ಪರ್ವ ಆರಂಭಿಸಲಿದೆ ಎಂದರು.
ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಕಳೆದ 27ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎಲ್ಲಾ ಪಕ್ಷಗಳು ದುರಾಡಳಿತವನ್ನು ನೀಡಿವೆ ಎಂದು ಆರೋಪಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ, ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನ ತತ್ತರಿಸಿ ಹೋಗಿದ್ದಾರೆ ಎಂದರು.
ಧಾನ್ಯಗಳನ್ನು ರೈತರಿಂದ 50 ರುಪಾಯಿಗೆ ಖರೀದಿಸುವ ಮೋದಿ, ಅದೇ ರೈತ ತನ್ನದೇ ಧಾನ್ಯವನ್ನು ಪುನಾಃ ಮಾರುಕಟ್ಟೆಯಲ್ಲಿ 200 ರುಪಾಯಿಗೆ ಖರೀದಿಸುತ್ತಿದ್ದಾನೆ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.