ರಾಜಧಾನಿ ದೆಹಲಿಯಲ್ಲೂ ಮಳೆ ಅವಾಂತರ; ಗುರಗಾಂವ್ ನಲ್ಲಿ ಭಾರಿ ಟ್ರಾಫಿಕ್ ಜಾಮ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಮಳೆ ಭಾರಿ ಅವಾಂತರ ಸೃಷ್ಟಿಸಿದ್ದು, ಗುರಗಾಂವ್ ನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿ ಕಿಮೀ ಗಟ್ಟಲೇ ವಾಹನಗಳು ನಿಲ್ಲುವಂತಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಮಳೆ ಭಾರಿ ಅವಾಂತರ ಸೃಷ್ಟಿಸಿದ್ದು, ಗುರಗಾಂವ್ ನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿ ಕಿಮೀ ಗಟ್ಟಲೇ ವಾಹನಗಳು ನಿಲ್ಲುವಂತಾಗಿದೆ.
ದೆಹಲಿ-ಗುರಗಾಂವ್ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 8ರಲ್ಲಿ ಸುಮಾರು ಸಾವಿರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದು, ಸ್ವತಃ ಗುರಗಾಂವ್ ಪೊಲೀಸರು ದೆಹಲಿಯಿಂದ ಆಗಮಿಸುವ ಪ್ರಯಾಣಿಕರು ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬರುವವರೆಗೂ ಪ್ರಯಾಣ ಕೈಗೊಳ್ಳದಂತೆ ಮನವಿ ಮಾಡಿದ್ದಾರೆ. ಗುರಗಾಂವ್ ಪೊಲೀಸರು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡಿದ್ದು, ಮಳೆಯಿಂದಾಗಿ ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ನಿಂತಿದೆ. ಹೀಗಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇಂದಿನ ಪ್ರಯಾಣವನ್ನು ಮುಂದೂಡಿ ಎಂದು ಸಲಹೆ ನೀಡಿದ್ದಾರೆ.
ಕಳೆದ ಮೂರು ದಿನಗಳಿಂದ ಗುರಗಾಂವ್ ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ದೆಹಲಿ-ಗುರಗಾಂವ್ ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ನಿಂತಿದೆ. ಹೀಗಾಗಿ ಈ ಭಾಗದ ರಸ್ತೆಗಳಲ್ಲಿ ಈ ಹಿಂದೆಂದೂ ಕಂಡುಕೇಳರಿಯದ ರೀತಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರಮುಖವಾಗಿ ಜೈಪುರ-ದೆಹಲಿ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ನಿಂತಿದ್ದು, ಸತತ 4 ರಿಂದ 5 ಗಂಟೆಗಳ ಕಾಲ ರಸ್ತೆಯಲ್ಲೇ ನಿಲ್ಲುವಂತಾಗಿದೆ.
ಈ ಹಿನ್ನಲೆಯಲ್ಲಿ ಜನತೆಯಲ್ಲಿ ಗುರಗಾಂವ್ ಪೊಲೀಸ್ ಆಯುಕ್ತ ನವದೀಪ್ ಸಿಂಗ್ ವಿರ್ಕ್ ಅವರು ಪ್ರಯಾಣಿಕರು ಇಂದು ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಗುರಗಾಂವ್ ನ ಬಹುತೇಕ ಟ್ರಾಫಿಕ್ ಪೊಲೀಸರನ್ನು ಗುರಗಾಂವ್-ದೆಹಲಿ ಮತ್ತು ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಯೋಜಿಸಿ ಟ್ರಾಫಿಕ್ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


