ಅತ್ಯಾಚಾರ ಪ್ರಕರಣ: ನಿರ್ದೇಶಕ ಫಾರೂಕಿ ಅಪರಾಧಿ ಎಂದು ದೆಹಲಿ ಕೋರ್ಟ್ ತೀರ್ಪು
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ಬಾಲಿವುಡ್ ಸಿನಿಮಾ ಪಿಪ್ಲಿ ಲೈವ್ ಸಹ ನಿರ್ದೇಶಕ ಮೊಹಮ್ಮದ್ ಫಾರೂಕಿ ಅಪರಾಧಿ...

Published On :
ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ಬಾಲಿವುಡ್ ಸಿನಿಮಾ ಪಿಪ್ಲಿ ಲೈವ್ ಸಹ ನಿರ್ದೇಶಕ ಮೊಹಮ್ಮದ್ ಫಾರೂಕಿ ಅಪರಾಧಿ ಎಂದು ಶನಿವಾರ ದೆಹಲಿ ಕೋರ್ಟ್ ತೀರ್ಪು ನೀಡಿದೆ.
ಕಳೆದ ವರ್ಷ ಬಾಲಿವುಡ್ ನಿರ್ದೇಶಕ ಫಾರೂಕಿ ಅಮೆರಿಕ ಮೂಲದ ಸಂಶೋಧಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ಜಡ್ಜ್ ಸಂಜೀವ್ ಜೈನ್ ಅವರು, ಐಪಿಸಿ ಸೆಕ್ಸೆನ್ 376(ಅತ್ಯಾಚಾರ)ರಡಿ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಾರೆ. ಆದರೆ ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 2ಕ್ಕೆ ಕಾಯ್ದಿರಿಸಿದ್ದಾರೆ.
ಕಳೆದ ವರ್ಷ ಮಾರ್ಚ್ 28ರಂದು ಮಾಹಿತಿ ಸಂಗ್ರಹಕ್ಕೆ ದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುಖದೇವ್ ವಿಹಾರದಲ್ಲಿ ಫಾರೂಕಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆಪಾದಿಸಿ ನ್ಯೂರ್ಯಾನ ಕೊಲಂಬಿಯಾ ವಿವಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ದೂರು ನೀಡಿದ್ದರು.
ತಮ್ಮಿಂದ ಆದ ಅಚಾತುರ್ಯಕ್ಕೆ ನ್ಯಾಯ ಪೀಠದ ಎದುರು ಫಾರೂಕಿ ಕ್ಷಮೆ ಯಾಚಿಸಿದ್ದರೂ ನೊಂದ ಯುವತಿ ಪ್ರಕರಣ ಹಿಂದೆ ಪಡೆದಿರಲಿಲ್ಲ.
ಕೋರ್ಟ್ ತೀರ್ಪು ಹೊರಬಿಳುತ್ತಿದ್ದಂತೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಾರೂಕಿ ಕೂಡಲೇ ವಶಕ್ಕೆ ಪಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


