ಅರವಿಂದ್ ಕೇಜ್ರಿವಾಲ್ ಮತ್ತೊಂದು ಆಘಾತ : ಆಪ್ ಶಾಸಕ ಶರದ್ ಚೌಹಾಣ್ ಬಂಧನ
ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ...

ನವದೆಹಲಿ: ಆಪ್ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿ ಎನ್ನುವ ಆರೋಪದ ಮೇಲೆ ಶಾಸಕ ಶರದ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪದ ಮೇಲೆ ಕಳೆದ ಬುಧವಾರ ಆಪ್ ಕಾರ್ಯಕರ್ತ ರಮೇಶ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು.
ಪಕ್ಷದಲ್ಲಿನ ಕಿರುಕುಳ ಕಾರಣ ಹೇಳಿಕೊಂಡು ಪಕ್ಷದ ಮಹಿಳಾ ಕಾರ್ಯಕರ್ತೆ ಸೋನಿ ಜುಲೈ 19ರಂದು ಇಲ್ಲಿನ ನರೇಲಾ ಎನ್ನುವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯ ಶಾಸಕರ ಕಿರಿಕಿರಿಯಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿದ್ದರು ಸೋನಿ ಪೋಷಕರು ಆರೋಪಿಸಿ ದೂರು ನೀಡಿದ್ದರು.
ಪೊಲೀಸರು ನೀಡಿರುವ ಮಾಹಿತಿಯಂತೆ, ಸೋನಿ ಆತ್ಮಹತ್ಯೆಗೂ ಮುನ್ನ ವಾಟ್ಸ್ಆಪ್ನಲ್ಲಿ ದಾಖಲಿಸಿದ ವಿಡಿಯೋ ಕ್ಲಿಪ್ನಲ್ಲಿ ಭಾರದ್ವಾಜ್, ಅಮಿತ್ ಕುಮಾರ್ ಮತ್ತು ರಜನಿಕಾಂತ್ ಅವರು ತಾನು ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಬೆದರಿಸಿದ್ದರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಜೂನ್ 2ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


