ಗೋಹತ್ಯೆ ಶಂಕೆ, ಮುಜಾಫರ್ ನಗರದಲ್ಲಿ ಮುಸ್ಲಿಂ ಕುಟುಂಬದ ಮನೆ ಮೇಲೆ ದಾಳಿ: ಉದ್ವಿಗ್ನ ಪರಿಸ್ಥಿತಿ
ಗೋಹತ್ಯೆ ನಡೆದಿದೆ ಎಂಬ ಶಂಕೆಯಿಂದ ಗುಂಪೊಂದು ಮನೆಯೊಂದರ ಮೇಲೆ ದಾಳಿ ನಡೆಸಿದ ಪರಿಣಾಮ ಮುಜಾಫರ್ ನಗರದ ಕಾಂಡ್ಲಾ ಗ್ರಾಮದಲ್ಲಿ ನಡೆದಿದೆ.

ಮುಜಾಫರ್ ನಗರ: ಗೋಹತ್ಯೆ ನಡೆದಿದೆ ಎಂಬ ಶಂಕೆಯಿಂದ ಗುಂಪೊಂದು ಮನೆಯೊಂದರ ಮೇಲೆ ದಾಳಿ ನಡೆಸಿದ ಪರಿಣಾಮ ಉತ್ತರ ಪ್ರದೇಶದ ಮುಜಾಫರ್ ನಗರದ ಕಾಂಡ್ಲಾ ಗ್ರಾಮದಲ್ಲಿ ನಡೆದಿದೆ.
ಜೀಶಾನ್ ಖುರೇಷಿ ನಿವಾಸದಲ್ಲಿ ಗೋಹತ್ಯೆ ಮಾಡಲಾಗಿದೆ ಎಂಬ ಶಂಕೆಯಿಂದ ಸ್ಥಳೀಯರು ಅವರ ಮನೆ ಮೇಲೆ ದಾಳಿ ನಡೆಸಿ ಮನೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪ್ರಕರಣದ ಸಂಬಂಧ ಒಂದೇ ಕುಟುಂಬದ ನಾಲ್ವರ ವಿರುದ್ಧ ಚಾರ್ಜಶೀಟ್ ದಾಖಲಾಗಿದೆ.
ಸ್ಥಳೀಯ ಗುಂಪು ದಾಳಿ ನಡೆಸಿ ಜೀಶಾನ್ ಖುರೇಷಿ ನಿವಾಸಾಕ್ಕೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಲಭೆ ನಿಯಂತ್ರಿಸಿದ್ದಾರೆ. ದಾಳಿಗೊಳಗಾದ ಮುಸ್ಲಿಂ ಕುಟುಂಬ ಸ್ಥಳದಿಂದ ಪರಾರಿಯಾಗಿದೆ. ಗೋಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಖುರೇಷಿ ಕುಟುಂಬದ ವಿರುದ್ಧ ಗೋಹತ್ಯೆ ಮಾಡಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲಿಸ್ ಪಡೆಯನ್ನು ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


