ಸೌದಿಯಲ್ಲಿ ಹಸಿವಿನಿಂದ ಬಳಲುತ್ತಿರುವ ಭಾರತೀಯರ ಸಂಖ್ಯೆ 800 ಅಲ್ಲ, 10 ಸಾವಿರ!: ಸುಷ್ಮಾ ಸ್ವರಾಜ್
ಸೌದಿ ಅರೇಬಿಯಾದಲ್ಲಿ ನೌಕರಿ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವ ಭಾರತೀಯರ ಸಂಖ್ಯೆ 800 ಅಲ್ಲ, 10 ಸಾವಿರ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ನವದೆಹಲಿ: ಸೌದಿ ಅರೇಬಿಯಾದಲ್ಲಿ ನೌಕರಿ ಕಳೆದುಕೊಂಡು ಹಸಿವಿನಿಂದ ಬಳಲುತ್ತಿರುವ ಭಾರತೀಯರ ಸಂಖ್ಯೆ 800 ಅಲ್ಲ, 10 ಸಾವಿರ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸೌದಿಯಲ್ಲಿರುವ ಭಾರತೀಯರಿಗೆ ಬೇರೆ ರೀತಿಯ ನೆರವು ನೀಡುವುದರ ಜೊತೆಗೆ ಆಹಾರವನ್ನು ಪೂರೈಕೆ ಮಾಡುವಂತೆ ಗಲ್ಫ್ ನ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಗಲ್ಫ್ ನಲ್ಲಿ ಸಮಸ್ಯೆ ಎದುರಿಸುತ್ತಿರುವ ಭಾರತೀಯ ಸಹೋದರರಿಗೆ ಸಹಾಯ ಮಾಡುವಂತೆ ಸುಷ್ಮಾ ಸ್ವರಾಜ್ ಸುಮಾರು 30 ಲಕ್ಷ ಕ್ಕೂ ಹೆಚ್ಚು ಭಾರತೀಯರಿಗೆ ಕರೆ ನೀಡಿದ್ದು, ಭಾರತೀಯರ ಒಗ್ಗಟಿಗಿಂತ ಶಕ್ತಿಯುತವಾದದ್ದು ಮತ್ತೊಂದಿಲ್ಲ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಸೌದಿಯಲ್ಲಿರುವ 800 ಕ್ಕೂ ಹೆಚ್ಚು ಭಾರತೀಯರು ಆಹಾರವಿಲ್ಲದೆ ಪರದಾಡುತ್ತಿದ್ದಾರೆ, ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಎಂದು ಟ್ವೀಟ್ ಮಾಡಿದ ಬಳಿಕ ಸುಷ್ಮಾ ಸ್ವರಾಜ್ ಸೌದಿಯಲ್ಲಿರುವ ಭಾರತೀಯರಿಗೆ ಸಹಾಯ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಮತ್ತಷ್ಟು ಹೆಚ್ಚು ಮಾಹಿತಿ ಪಡೆದಿರುವ ಸಚಿವೆ ಸುಷ್ಮಾ ಸ್ವರಾಜ್ ಸೌದಿಯಲ್ಲಿ ಆಹಾರಕ್ಕಾಗಿ ಪರದಾಡುತ್ತಿರುವ ಭಾರತೀಯರ ಸಂಖ್ಯೆ 800 ಅಲ್ಲ 10 ಸಾವಿರ ಎಂದು ತಿಳಿಸಿದ್ದಾರೆ.
ವಿದೇಶಾಂಗ ಇಲಾಖೆ ರಾಜ್ಯ ಸಚಿವರಾಗಿರುವ ಎಂಜೆ ಅಕ್ಬರ್ ಭಾರತೀಯರ ಪರಿಸ್ಥಿತಿ ಕುರಿತು ಸೌದಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಹಾಗೂ ವಿಕೆ ಸಿಂಗ್ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


