ದೇಶ

ತಾಯಿ, ಮಗಳನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ದರೋಡೆಕೋರರು

ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಎಳೆದೊಯ್ದ ದರೋಡೆಕೋರರು 3 ಗಂಟೆಗಳ ಕಾಲ ಅತ್ಯಾಚಾರ ನಡೆಸಿ, ಅವರ ಬಳಿಯಿದ್ದ ಚಿನ್ನಾಬರಣ ಹಾಗೂ ಹಣವನ್ನು ..

ತಾಯಿ, ಮಗಳನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ದರೋಡೆಕೋರರು
ಸಾಂದರ್ಭಿಕ ಚಿತ್ರ
Published On :

ಬುಲಂದ್ ಶೀರ್: ಸಮಾಜವಾದಿ ಪಕ್ಷ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಮತ್ತೊಂದು ಅತ್ಯಾಚಾರ ಪ್ರಕರಣ.

ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಎಳೆದೊಯ್ದ ದರೋಡೆಕೋರರು 3 ಗಂಟೆಗಳ ಕಾಲ ಅತ್ಯಾಚಾರ ನಡೆಸಿ, ಅವರ ಬಳಿಯಿದ್ದ ಚಿನ್ನಾಬರಣ ಹಾಗೂ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಗ್ರಾಮದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ಮತ್ತು ಆಕೆಯ ಮಗಳು ತಮ್ಮ ಕುಟುಂಬದ ಜೊತೆ ರಾಷ್ಟ್ರೀಯ ಹೆದ್ದಾರಿ 9ರ ಮೂಲಕವಾಗಿ ತಮ್ಮ ಸ್ವಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಅವರು ಬರುತ್ತಿದ್ದ ಕಾರು ದೋಸ್ತ್ ಪುರ್ ಬಳಿ ಸೈಕಲ್ ಶಾಪ್ ಬಳಿ ಕೆಟ್ಟು ನಿಂತಿತು.

ಈ ವೇಳೆ ಬಂದ ಆರರಿಂದ 8 ಜನರಿದ್ದ ತಂಡ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ತಮ್ಮ ವಾಹನದಲ್ಲಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು  ಸಂತ್ರಸ್ತರ ಸಂಬಂಧಿ ಹೇಳಿದ್ದಾರೆ. ಘಟನೆ ನಡೆದ ಬೆಳಗ್ಗೆ ಈ ಸಂಬಂಧ ದೂರು ದಾಖಲಿಸಲಾಗಿದೆ, ಆದರೆ ಇದುವರೆಗೂ ಯಾರನ್ನು ಬಂಧಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.