ಅಸಹಿಷ್ಣುತೆ ಹೇಳಿಕೆ: ಆಮಿರ್ ಖಾನ್ ವಿರುದ್ಧ ಪರಿಕ್ಕರ್ ಪರೋಕ್ಷ ವಾಗ್ದಾಳಿ
ಈ ಹಿಂದೆ ದೇಶದಲ್ಲಿ ಅಸಹಿಷ್ಣುತೆ ಇದೆ ಹೇಳಿಕೆ ನೀಡಿದ್ದ ಬಾಲಿವುಡ್ ಖ್ಯಾತ ನಟ ಆಮಿರ್ ಖಾನ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ರಕ್ಷಣಾ...

Published On :
ಪುಣೆ: ಈ ಹಿಂದೆ ದೇಶದಲ್ಲಿ ಅಸಹಿಷ್ಣುತೆ ಇದೆ ಹೇಳಿಕೆ ನೀಡಿದ್ದ ಬಾಲಿವುಡ್ ಖ್ಯಾತ ನಟ ಆಮಿರ್ ಖಾನ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ದೇಶದಲ್ಲಿದ್ದು, ದೇಶದ ವಿರುದ್ಧ ಮಾತನಾಡುವವರು ಸಾಮರಸ್ಯ ಕದಡುವ ಯತ್ನ ಮಾಡುತ್ತಿದ್ದು, ಅವರಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಭಾನುವಾರ ಹೇಳಿದ್ದಾರೆ.
ಇಂದು ಪುಣೆಯಲ್ಲಿ ಪತ್ರಕರ್ತ ನಿತಿನ್ ಗೋಖಲೆಯವರ ಸಿಯಾಚಿನ್ ಎಂಬ ಪುಸ್ತಕದ ಮರಾಠಿ ಅವತರಣಿಕೆ ಬಿಡುಗಡೆ ಮಾಡಿ ಮಾತನಾಡಿದ ಪರಿಕ್ಕರ್, ನಟನೊಬ್ಬ ದೇಶ ಬಿಟ್ಟು ಹೋಗುವುದಾಗಿ ಹೇಳುತ್ತಾರೆ, ಇದು ಉದ್ಧಟತನದ ಹೇಳಿಕೆ, ಮನೆ ಎಷ್ಟೆ ಚಿಕ್ಕದಿದ್ದರೂ ಮನೆ ತೊರೆಯುವ ಮಾತನ್ನಾಡದೆ, ಇರುವ ಜಾಗದಲ್ಲೆ ಬಂಗಲೆ ಕಟ್ಟುವ ಕನಸು ಕಾಣಬೇಕು ಎಂದು ಆಮಿರ್ ಖಾನ್ ಹೆಸರು ಹೇಳದೆ ಪರೋಕ್ಷವಾಗಿ ಚಾಟಿ ಬೀಸಿದರು.
ಆಮಿರ್ ಖಾನ್ ಅವರು ಕಳೆದ ನವಂಬರ್ನಲ್ಲಿ ದೇಶದಲ್ಲಿ ಅಸಹಿಷ್ಣತೆ ಇದೆ ಆದ್ದರಿಂದ ಹೆಂಡತಿ ದೇಶ ತೊರೆಯಲು ಸಲಹೆ ನೀಡಿದ್ದಾಳೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


