ಜಿಎಸ್ ಟಿ ಮಸೂದೆ: ರಾಜ್ಯ ಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಿದ ಬಿಜೆಪಿ
ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ...

Published On :
ನವದೆಹಲಿ: ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.
ಸರಕು ಮತ್ತು ಸೇವಾ ತೆರಿಗೆ ಮಸೂದೆಯ ಚರ್ಚೆ ಸಂದರ್ಭದಲ್ಲಿ ಮುಂದಿನ ಮೂರು ದಿನಗಳ ಕಾಲ ಸದನದಲ್ಲಿ ಉಪಸ್ಥಿತಿಯಿರಬೇಕೆಂದು ಕಡ್ಡಾಯ ಮಾಡಲಾಗಿದೆ.ಜಿಎಸ್ ಟಿ ಮಸೂದೆ ನಾಳೆ ರಾಜ್ಯ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
ಮೊನ್ನೆ ತಮ್ಮ ಸಂಪುಟದ ಹಿರಿಯ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆಯ ಅಂಗೀಕಾರಕ್ಕೆ ನಡೆಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದರು. ರಾಜ್ಯ ಸಭೆಯ ವ್ಯವಹಾರ ಸಲಹಾ ಸಮಿತಿ ಮಸೂದೆ ಕುರಿತು ಸುಮಾರು 5 ಗಂಟೆಗಳ ಕಾಲ ಚರ್ಚಿಸಿದ್ದು, ದೇಶಾದ್ಯಂತ ಏಕರೂಪದ ತೆರಿಗೆ ಪದ್ಧತಿ ಜಿಎಸ್ ಟಿಯನ್ನು ಜಾರಿಗೆ ತರುವ ಉತ್ಸುಕತೆಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


