ದೇಶ

ಮಹಾ ಸಚಿವ ಖಾಡ್ಸೆ ಅವಳಿ ಹಗರಣದ ಬಗ್ಗೆ ವರದಿ ಕೇಳಿದ ಅಮಿತ್ ಶಾ

ಮಹಾರಾಷ್ಟ್ರ ಸರ್ಕಾರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರು ಈಗ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ...

ಮಹಾ ಸಚಿವ ಖಾಡ್ಸೆ ಅವಳಿ ಹಗರಣದ ಬಗ್ಗೆ ವರದಿ ಕೇಳಿದ ಅಮಿತ್ ಶಾ
ಏಕನಾಥ್ ಖಾಡ್ಸೆ
Published On :
ನವದೆಹಲಿ/ಮುಂಬೈ: ಮಹಾರಾಷ್ಟ್ರ ಸರ್ಕಾರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರು ಈಗ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. 
ಹೌದು. ಖಾಡ್ಸೆ ಅವರ ಅಕ್ರಮ ಭೂ ವ್ಯವಹಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಹಾ ಬಿಜೆಪಿಯಿಂದ ವರದಿ ಕೇಳಿದ್ದಾರೆ.
ಖಾಡ್ಸೆ ಅವರ ಈ ಅವಳಿ ಹಗರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಅಮಿತ್ ಶಾ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ ಬಳಿಕ, ಖಾಡ್ಸೆ ವಿವಾದವನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಫಡ್ನವಿಸ್ ಅವರು ಕಳೆದ ಸೋಮವಾರ ಖಾಡ್ಸೆಯೊಂದಿಗೆ ವಿವರಾಗಿ ಚರ್ಚಿಸಿದ್ದಾರೆ. ಅಲ್ಲದೆ ರಾಜಿನಾಮೆ ನೀಡುವಂತೆ ಸಹ ಸೂಚಿಸಲಾಗಿತ್ತು. ಆದರೆ ರಾಜಿನಾಮೆ ನೀಡಲು ನಿರಾಕರಿಸುತ್ತಿರುವ ಖಾಡ್ಸೆ ಮೇಲೆ ಕೇಂದ್ರ ಬಿಜೆಪಿ ಒತ್ತಡ ಹೇರುತ್ತಿದೆ ಎಂದು ಹೆಸರು ಹೇಳಲಿಚ್ಚಿಸಿದ ಹಿರಿಯ ಬಿಜೆಪಿ ನಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.