ದೇಶ

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ತ್ರೀಪು ಪ್ರಕಟ; ಗುಜರಾತ್ ನಲ್ಲಿ ವ್ಯಾಪಕ ಭದ್ರತೆ

2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ತೀರ್ಪು ಗುರುವಾರ ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಸುತ್ತಮುತ್ತಲ ಆವರಣ ಸೇರಿದಂತೆ ಗುಜರಾತ್ ನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ತ್ರೀಪು ಪ್ರಕಟ; ಗುಜರಾತ್ ನಲ್ಲಿ ವ್ಯಾಪಕ ಭದ್ರತೆ
ಅಹ್ಮದಾಬಾದ್ ನ್ಯಾಯಾಲಯದ ಸುತ್ತ ಬಿಗಿ ಭದ್ರತೆ (ಸಂಗ್ರಹ ಚಿತ್ರ)
Published On :

ಅಹ್ಮದಾಬಾದ್: 2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ತೀರ್ಪು ಗುರುವಾರ ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಸುತ್ತಮುತ್ತಲ ಆವರಣ ಸೇರಿದಂತೆ ಗುಜರಾತ್ ನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮೂಲಗಳ ಪ್ರಕಾರ ಪ್ರಕರಣದ ತೀರ್ಪು ಪ್ರಕಟಿಸಲಿರುವ ಅಹ್ಮದಾಬಾದ್ ನ್ಯಾಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತುರ್ತು ಪ್ರಹಾರ ದಳ, ಅಶ್ರುವಾಯು ದಳ, ಸಿಆರ್ ಪಿಎಫ್ ಯೋಧರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ತೀರ್ಪು ಏನೇ ಆದರೂ ಎದುರಾಳಿ ಧಾರ್ಮಿಕ ಸಂಘಟನೆಯ ಕಾರ್ಯಕರ್ತರು ಗಲಭೆ ಎಬ್ಬಿಸುವ ಆಂತಕವಿದ್ದು, ಇದೇ ಕಾರಣಕ್ಕಾಗಿ ನ್ಯಾಯಾಲಯದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ ಸುಮಾರು  69 ಮಂದಿಯನ್ನು ಬಲಿ ಪಡೆದಿದ್ದ 2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡಕ್ಕೆ ಸಂಬಂಧಿಸಿದ ಪ್ರಕರಣವೊಂದರ ತೀರ್ಪನ್ನು ಅಹ್ಮದಾಬಾದ್‌ನ ವಿಚಾರಣಾ ನ್ಯಾಯಾಲಯ ಇಂದು ಘೋಷಣೆ ಮಾಡಲಿದೆ. ನ್ಯಾಯಮೂರ್ತಿ ಪಿಬಿ ದೇಸಾಯಿ ಅವರು ಸತತ 8 ತಿಂಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದು, 2015 ಸೆಪ್ಟೆಂಬರ್ 22ರ ವರೆಗೆ ನಡೆದಿದ್ದ ವಿಚಾರಣೆಯನ್ನು ಒಳಗೊಂಡಂತೆ ಇಂದು ತಮ್ಮ ಅಂತಿಮ ತೀರ್ಪು ಪ್ರಕಟಿಸಲಿದ್ದಾರೆ.

ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಮತ್ತು ತೀರ ಸೂಕ್ಷ್ಮ ಪ್ರಕರಣವಾದ್ದರಿಂದ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಈ ಪ್ರಕರಣದ ವಿಚಾರಣೆಯನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ನಡೆಸಿತ್ತು. ಕಳೆದ ಫೆಬ್ರವರಿ 26ರಂದು ನಡೆದಿದ್ದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಅಹ್ಮದಾಬಾದ್ ನ್ಯಾಯಾಲಯಕ್ಕೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು. ಅಲ್ಲದೆ ತೀರ್ಪು ಪ್ರಕಟಿಸುವುದಕ್ಕೆ ವಿಚಾರಣಾ ನ್ಯಾಯಾಧೀಶರಿಗೆ ಯಾವುದೇ ಅಡ್ಡಿಯಿಲ್ಲವೆಂದಿದ್ದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ಪೀಠ, ಮೂರು ತಿಂಗಳ ಕಾಲಾವಕಾಶ ಮಂಜೂರು ಮಾಡಿತ್ತು.

ಇದೀಗ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಪ್ರಕರಣದ ತೀರ್ಪನ್ನು ಇಂದು ಪ್ರಕಟಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.