ಸಿಎಂ ಜಯಲಲಿತಾಗೆ ಅಭಿನಂದನೆ ಸಲ್ಲಿಸಿದ್ದಕ್ಕೆ ಐಎಎಸ್ ಅಧಿಕಾರಿಗೆ ನೋಟಿಸ್!
ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಲಲಿತಾ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದ್ದ ಐಎಎಸ್ ಅಧಿಕಾರಿಯೊಬ್ಬರಿಗೆ ಮಧ್ಯಪ್ರದೇಶ...

ಭೋಪಾಲ್: ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಲಲಿತಾ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದ್ದ ಐಎಎಸ್ ಅಧಿಕಾರಿಯೊಬ್ಬರಿಗೆ ಮಧ್ಯಪ್ರದೇಶ ಸರ್ಕಾರ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.
ಜಯಲಲಿತಾ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ನರ್ಸಿಂಗಪೂರ್ ನ ಜಿಲ್ಲಾಧಿಕಾರಿ ಶಿಬಿ ಚಕ್ರವರ್ತಿಯವರು ತಮ್ಮ ಫೇಸ್ ಬುಕ್ ನ ಗೋಡೆಯಲ್ಲಿ ಅಭಿನಂದನೆ ಸಲ್ಲಿಸಿದ್ದರು. ಮೇ.19 ರಂದು ತಮ್ಮ ಫೇಸ್ ಬುಕ್ ನಲ್ಲಿ ಕಂಗ್ರಾಟ್ಸ್ ಅಮ್ಮ ಎಂದು ಬರೆದುಕೊಂಡಿದ್ದರು, ಇದಾದ ಕೆಲವೇ ಗಂಟೆಗಳಲ್ಲಿ ತಮ್ಮ ಪೋಸ್ಟ್ ನ್ನು ಡಿಲಿಟ್ ಮಾಡಿದ್ದರು.
ಈ ಪೋಸ್ಟ್ ನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಸರ್ಕಾರ, ಚಕ್ರವರ್ತಿಯವರು ನಾಗರೀಕ ಸೇವಾ ನಿಂಬಧನೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


