ತ.ನಾಡು ಸ್ಪೀಕರ್ ಆಗಿ ಧನಪಾಲ್ ಆಯ್ಕೆ, ಸರ್ಕಾರ ಪ್ರತಿಪಕ್ಷವನ್ನು ಗೌರವಿಸುತ್ತೆ ಎಂದ ಜಯಾ
ಆಡಳಿತರೂಢ ಎಐಎಡಿಎಂಕೆಯ ಪಿ.ಧನಪಾಲ್ ಅವರು ಶುಕ್ರವಾರ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Published On :
ಚೆನ್ನೈ: ಆಡಳಿತರೂಢ ಎಐಎಡಿಎಂಕೆಯ ಪಿ.ಧನಪಾಲ್ ಅವರು ಶುಕ್ರವಾರ ತಮಿಳುನಾಡು ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ವಿಧಾನಸಭೆ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಇಂದು ಸ್ವೀಕರ್ ಹುದ್ದೆಗೆ ಧನಪಾಲ್ ಅವರ ಹೆಸರನ್ನು ಹಾಗೂ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಪೊಲ್ಲಚಿ ವಿ ಜಯರಾಮನ್ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಬಳಿಕ ಈ ಇಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಜಯಲಲಿತಾ, ನಮ್ಮ ಸರ್ಕಾರ ಪ್ರತಿಪಕ್ಷವನ್ನು ಗೌರವಿಸುತ್ತೆ ಎಂದು ಹೇಳಿದರು.
ಇನ್ನು ಎರಡನೇ ಅವಧಿಗೆ ತಮಿಳುನಾಡು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾದ ಧನಪಾಲ್ ಅವರು, ಜಯಲಲಿತಾ ಅವರ ಐತಿಹಾಸಿಕ ಗೆಲುವನ್ನು ಸ್ಲಾಘಿಸಿದರು. ಜಯಲಲಿತಾ ಅವರು ಕೇವಲ ತಮ್ಮ ಸಾಧನೆಗಳನ್ನೇ ಮುಂದಿಟ್ಟುಕೊಂಡು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಿ ಗೆಲುವು ಸಾಧಿಸಿದ್ದಾರೆ ಮತ್ತು ಧರ್ಮವನ್ನು ರಕ್ಷಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


