ರಂಜಾನ್ ಗಾಗಿ ಸಿಎಂ ಜಯಲಲಿತಾರಿಂದ ಮಸೀದಿಗೆಅಕ್ಕಿ ಭಾಗ್ಯ
ರಂಜಾನ್ ಹಬ್ಬಕ್ಕೆ ಮುಖ್ಯಮಂತ್ರಿ ಜಯಲಲಿತಾ ಬಂಪರ್ ಕೊಡುಗೆ ನೀಡಿದ್ದಾರೆ. ರಂಜಾನ್ ಅವಧಿಯಲ್ಲಿ ಮಸೀದಿಗಳಿಗೆ ಉಚಿತ ಅಕ್ಕಿ ನೀಡುವುದಾಗಿ ಪ್ರಕಟಿಸಿದ್ದಾರೆ...

ಚೆನ್ನೈ: ರಂಜಾನ್ ಹಬ್ಬಕ್ಕೆ ಮುಖ್ಯಮಂತ್ರಿ ಜಯಲಲಿತಾ ಬಂಪರ್ ಕೊಡುಗೆ ನೀಡಿದ್ದಾರೆ. ರಂಜಾನ್ ಅವಧಿಯಲ್ಲಿ ಮಸೀದಿಗಳಿಗೆ ಉಚಿತ ಅಕ್ಕಿ ನೀಡುವುದಾಗಿ ಪ್ರಕಟಿಸಿದ್ದಾರೆ.
3,000 ಮಸೀದಿಗಳಿಗೆ ಒಟ್ಟು 4,600 ಟನ್ ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಜಯಲಲಿತಾ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಜಯಲಲಿತಾ ಈ ಯೋಜನೆಯನ್ನು ನಮ್ಮ ಸರ್ಕಾರ 2001ರಿಂದಲೇ ಆರಂಭ ಮಾಡಿದೆ.3000 ಮಸೀದಿಗಳು ಈ ಯೋಜನೆಯ ಫಲಾನುಭವಿಗಳಾಗಿದ್ದು, ಉತ್ತಮ ದರ್ಜೆಯ ಅಕ್ಕಿ ಮುಸ್ಲಿಮ ಬಾಂಧವರಿಗೆ ಸಿಗುವಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಉಚಿತವಾಗಿಯೇ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಉಚಿತ ವಿತರಣೆ ಯೋಜನೆಯನ್ನು ಮುಂದುವರಿಸಿದ್ದಾರೆ. .
ಮುಂದಿನ ವಾರದಿಂದ ಆರಂಭವಾಗುವ ರಂಜಾನ್ ಮಾಸಾಚರಣೆ ಹಿನ್ನೆಲೆಯಲ್ಲಿ ಅಕ್ಕಿ ವಿತರಿಸಬೇಕೆಂದು ತಮಿಳುನಾಡು ಸರಕಾರ ಆದೇಶಿಸಿದೆ. ರಂಜಾನ್ ಆಚರಣೆಗೆ ಅಕ್ಕಿ ವಿತರಿಸುವಂತೆ ಮುಸ್ಲಿಂ ಬಾಂಧವರು ಆಗ್ರಹಿಸಿದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿರುವ 3 ಸಾವಿರ ಮಸೀದಿಗಳಿಗೆ ಸುಮಾರು 4,600 ಟನ್ ಅಕ್ಕಿ ವಿತರಿಸುವಂತೆ ಸಿಎಂ ಕಚೇರಿ ಹೊರಡಿಸಿರುವ ಆದೇಶ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


