ಮೋದಿ ವಿಶ್ವದ ಪ್ರಮುಖ 10 ನಾಯಕರಲ್ಲಿ ಒಬ್ಬರು: ವೆಂಕಯ್ಯ ನಾಯ್ಡು
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ಪ್ರತಿಪಕ್ಷಗಳು 'ಕೀಳುಮಟ್ಟದ' ಹೇಳಿಕೆಗಳನ್ನು ನೀಡಿತ್ತಿವೆ ಎಂದು ಆರೋಪಿಸಿರುವ...

Published On :
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ಪ್ರತಿಪಕ್ಷಗಳು 'ಕೀಳುಮಟ್ಟದ' ಹೇಳಿಕೆಗಳನ್ನು ನೀಡಿತ್ತಿವೆ ಎಂದು ಆರೋಪಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಮೋದಿ ವಿಶ್ವದ ಪ್ರಮುಖ 10 ನಾಯಕರಲ್ಲಿ ಒಬ್ಬರಾಗಿದ್ದು, ಜಾಗತಿಕ ವೇದಿಕೆಯಲ್ಲಿ ಅವರ ಧ್ವನಿಯನ್ನು ಆಲಿಸುತ್ತಿದ್ದಾರೆ ಎಂದಿದ್ದಾರೆ.
'ಈಗ ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತಿದೆ ಮತ್ತು ಗೌರವಿಸಲಾಗುತ್ತಿದೆ. ಮೋದಿ ಅವರಿಗೆ ಇತರೆ ದೇಶಗಳು ಒಂದರ ಹಿಂದೆ ಒಂದು ಕೆಂಪು ಹಾಸಿನ ಸ್ವಾಗತ ನೀಡುತ್ತಿ. ಅವರು ಈಗ ವಿಶ್ವದ ಪ್ರಮುಖ 10 ನಾಯಕರಲ್ಲಿ ಒಬ್ಬರು' ಎಂದು ನಾಯ್ಡು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಭಾರತಕ್ಕೆ ಬ್ರಿಕ್ಸ್ ಬ್ಯಾಂಕ್ ನ ಮೊದಲ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಮತ್ತು ವಿಶ್ವಸಂಸ್ಥೆ 'ಯೋಗ ಅಂತಾರಾಷ್ಟ್ರಿಯ ದಿನ' ಘೋಷಿಸಿರುವುದು ಜಾಗತಿಕ ವೇದಿಕೆಯಲ್ಲಿ ಮೋದಿ ಅವರ ಸಲಹೆಗಳನ್ನು ಸ್ವೀಕರಿಸುತ್ತಿರುವುದಕ್ಕೆ ಸಾಕ್ಷಿ ಎಂದು ಸಂಸದೀಯ ವ್ಯವಹಾರಗಳ ಸಚಿವ ಹೇಳಿದ್ದಾರೆ.
ಹವಾಮಾನ ಬದಲಾವಣೆ ಹಾಗೂ ಭಯೋತ್ಪಾದನೆಯಂತಹ ವಿಷಯಗಳಲ್ಲಿ ವಿಶ್ವ ನಾಯಕರು ಪ್ರಧಾನಿ ಮೋದಿ ಅವರ ಮಾತನ್ನು ಕೇಳುತ್ತಾರೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ನಾಯ್ಡು, ಈ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು 75 ದೇಶಗಳಿಗೆ ಭೇಟಿ ನೀಡಿದ್ದಾರೆ. ದೇಶದ ಆರ್ಥಿಕತೆ ಅಭಿವೃದ್ಧಿಗಾಗಿ ಹಾಗೂ ರಾಜತಾಂತ್ರಿಕ ಸಂಬಂಧ ವೃದ್ಧಿಗಾಗಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ವಿದೇಶ ಪ್ರವಾಸವನ್ನು ನಾಯ್ಡು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


