ದೇಶ

ನಿತೀಶ್‌ ಕುಮಾರ್ ಮೋದಿಯನ್ನು ಸೋಲಿಸಬಹುದು: ಬಾಬು ಲಾಲ್‌ ಮರಾಂಡಿ

2019ರ ಲೋಕಸಭಾ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದು...

ನಿತೀಶ್‌ ಕುಮಾರ್ ಮೋದಿಯನ್ನು ಸೋಲಿಸಬಹುದು: ಬಾಬು ಲಾಲ್‌ ಮರಾಂಡಿ
ಬಾಬು ಲಾಲ್ ಮರಾಂಡಿ
Published On :

ಪಟ್ನಾ : 2019ರ ಲೋಕಸಭಾ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯಾಗಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದು, ಅವರು ಮಾತ್ರ ನರೇಂದ್ರ ಮೋದಿಯವರನ್ನು ಸೋಲಿಸಬಲ್ಲರು ಎಂದು ಜಾರ್ಖಂಡ್‌ ವಿಕಾಸ್‌ ಮೋರ್ಚಾ (ಜೆವಿಎಂ) ಮುಖ್ಯಸ್ಥ ಬಾಬು ಲಾಲ್‌ ಮರಾಂಡಿ ಶುಕ್ರವಾರ ಹೇಳಿದ್ದಾರೆ.

ಜಾರ್ಖಂಡ್‌ ಗಡಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಪಾಟ್ನಾಕ್ಕೆ ನಿತೀಶ್‌ ಕುಮಾರ್‌ ಅವರನ್ನು ಭೇಟಿಯಾಗಲು ಬಂದಿದ್ದ ಮರಾಂಡಿ,  2019ರ ಲೋಕಸಭಾ ಚುನಾವಣೆಯನ್ನು ಗೆಲ್ಲಲು ದೇಶಾದ್ಯಂತ ಇರುವ ಎಲ್ಲ ಪ್ರಾದೇಶಿಕ, ಜಾತ್ಯತೀಯ ಪ್ರಜಾಸತ್ತಾತ್ಮಕ ಪಕ್ಷಗಳು ಒಗ್ಗೂಡಬೇಕಾಗಿದೆ. ಆ ಮೂಲಕ ಬಿಜೆಪಿಯನ್ನು ಸೋಲಿಸಬೇಕು ಎಂದು ಹೇಳಿದರು.

ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ನಿನ್ನೆ ನಿತೀಶ್‌ ಕುಮಾರ್‌ ಅವರಿಗೆ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಇಲ್ಲ; ಅವರು ಬಿಜೆಪಿ ವಿರುದ್ಧದ ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾತ್ರವೇ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಮರಾಂಡಿ ಅವರು ಜಾರ್ಖಂಡ್‌ನ‌ಲ್ಲಿ ನಿತೀಶ್‌ ಕುಮಾರ್‌ ಅವರ ಜತೆಗೆ ಸೇರಿ ಅವರ ಪಕ್ಷವನ್ನು ಬಲಪಡಿಸಲಿದ್ದಾರೆ ಎಂದು ಜೆಡಿಯು ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.