'2019 ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಗೆ ಗೆಲುವು ಖಂಡಿತ'
2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್...

Published On :
ಪಾಟ್ನಾ: 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಣಿಸಲಿದ್ದಾರೆ ಎಂದು ಜಾರ್ಕಾಂಡ್ ವಿಕಾಸ್ ಮೋರ್ಚಾ ಮುಖ್ಯಸ್ಥ ಬಾಬು ಲಾಲ್ ಮರಂಡಿ ಹೇಳಿದ್ದಾರೆ.
ನಿತೀಶ್ ಕುಮಾರ್ ಗೆ ಪ್ರಧಾನ ಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಇವೆ. 2019ರಲ್ಲಿ ಬಿಜೆಪಿಯನ್ನು ಅವರು ಸೋಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇಂದು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ಬಾಬು ಲಾಲ್ ಜಾರ್ಖಾಂಡ್ ಮತ್ತು ಬಿಹಾರದ ಗಡಿ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.
ತದ ನಂತರ ಮಾತನಾಡಿದ ಅವರು ಎಲ್ಲಾ ಪ್ರಾದೇಶಿಕ ಮತ್ತು ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷಗಳು ಬಿಜೆಪಿಯನ್ನು ಸೋಲಿಸಲು ಒಂದಾಗಿವೆ ಎಂದು ತಿಳಿಸಿದ್ದಾರೆ. ಇನ್ನು ಬಾಬು ಲಾಲ್ ಮರಂಡಿ ಅವರು ನಿತೀಶ್ ಕುಮಾರ್ ಅವರೊಂದಿಗೆ ಕೈಜೋಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿನಿತೀಶ್ ಕುಮಾರ್Nitish Kumarಲೋಕಸಭಾ ಚುನಾವಣೆLok Sabha pollsJharkhand Vikas Morchaಜಾರ್ಖಂಡ್ ವಿಕಾಸ್ ಮೋರ್ಚಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


