ದೇಶ

ಲಂಕಾದಿಂದ ಮೀನುಗಾರರ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಜಯಾ ಪತ್ರ

ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರನ್ನು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ...

ಲಂಕಾದಿಂದ ಮೀನುಗಾರರ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಜಯಾ ಪತ್ರ
ಜಯಲಲಿತಾ
Published On :
ಚೆನ್ನೈ: ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರನ್ನು ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಎರಡು ದಿನಗಳ ಹಿಂದೆ ಶ್ರೀಲಂಕಾ ನೌಕಾ ಪಡೆ ನಾಲ್ವರು ತಮಿಳುನಾಡು ಮೀನುಗಾರರನ್ನು ಬಂಧಿಸಿತ್ತು. ಈ ಸಂಬಂಧ ಪ್ರಧಾನಿ ಪತ್ರ ಬರೆದಿರುವ ಜಯಾ ಮೀನುಗಾರರ ಬಿಡುಗಡೆಗೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಆಗ್ರಹಿಸಿದ್ದಾರೆ.
ನಾಲ್ವರು ಮೀನುಗಾರರನ್ನು ಶ್ರೀಲಂಕಾ ನೌಕಾ ಪಡೆ ಬಂಧಿಸಿ, ಕಂಕೇಸಂತುರೈಗೆ ಕರೆದೊಯ್ದಿದಿರುವುದಾಗಿ ಜಯಲಲಿತಾ ಪತ್ರದಲ್ಲಿ ತಿಳಿಸಿದ್ದಾರೆ. ಮೀನುಗಾರರು ಪುದುಕೊಟ್ಟಾಯಿ ಜಿಲ್ಲೆಯ ಕೊಟ್ಟಾಯಿಪಟ್ಟಣಮ್ಂದ ಜೂನ್ 1ರಂದು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದರು.
ಇದಕ್ಕೂ ಮುನ್ನ ಮೇ 31ರಂದು ಶ್ರೀಲಂಕಾ ನೌಕಾಪಡೆಯು ಏಳು ತಮಿಳುನಾಡು ಮೀನುಗಾರರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.