ಮಧುರೈ ನಲ್ಲಿ ಶಂಕಿತ ಐಇಡಿ ಬಾಂಬ್ ಸ್ಫೋಟ
ಮಧುರೈ ನಲ್ಲಿ ಎವಿ ಬ್ರಿಡ್ಜ್ ಬಳಿ ಸ್ಫೋಟ ಸಂಭವಿಸಿದ್ದು ಐಇಡಿ ಬಾಂಬ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮಧುರೈ: ಮಧುರೈ ನಲ್ಲಿ ಎವಿ ಬ್ರಿಡ್ಜ್ ಬಳಿ ಸ್ಫೋಟ ಸಂಭವಿಸಿದ್ದು ಐಇಡಿ ಬಾಂಬ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಲಾರಿ ಕೆಳಗೆ ಈ ಸ್ಫೋಟ ಸಂಭವಿಸಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದಿಂದ ಉಂಟಾದ ಬೆಂಕಿಯನ್ನು ಹರಡದಂತೆ ತಕ್ಷಣವೇ ತಹಬದಿಗೆ ತರಲಾಗಿದ್ದು ಪೊಲೀಸರು 9 ವೋಲ್ಟ್ ನ ಎರಡು ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖಾ ವರದಿಗಳಿಂದ ಐಇಡಿ ಬಾಂಬ್ ನ್ನು ಬಳಸಿ ಸ್ಫೋಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಕಳೆದ ಸೆಪ್ಟೆಂಬರ್ ನಲ್ಲಿ ಬಸ್ ವೊಂದರಲ್ಲಿ ಇದೇ ಮಾದರಿಯ ಸ್ಫೋಟ ಸಂಭವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


